ADVERTISEMENT

ಕಾಂತಾರ ಚಾಪ್ಟರ್–1 ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು : ನಟ ಯಶ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಅಕ್ಟೋಬರ್ 2025, 10:28 IST
Last Updated 3 ಅಕ್ಟೋಬರ್ 2025, 10:28 IST
   

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ 'ಕಾಂತಾರ ಚಾಪ್ಟರ್ –1' ಕನ್ನಡ ಹಾಗೂ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಆಗಲಿದೆ ಎಂದು ನಟ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅನೇಕ ಅಡೆತಡೆಗಳನ್ನು ಎದುರಿಸಿದರೂ ತಮ್ಮ ಉದ್ದೇಶದಿಂದ ಹಿಂದೆ ಸರಿಯದೆ ಚಿತ್ರವನ್ನು ಅದ್ಧೂರಿಯಾಗಿ ಬಿಡುಗಡೆಗೊಳಿಸಿ ಯಶಸ್ವಿಯಾಗಿದ್ದಾರೆ ಎಂದು ಯಶ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸಿನಿಮಾದಲ್ಲಿ ದೈವದ ಮೇಲಿನ ನಿಮ್ಮ ಭಕ್ತಿ ಪ್ರತಿ ಚೌಕಟ್ಟಿನಲ್ಲೂ ಸ್ಪಷ್ಟವಾಗಿ ಕಾಣಿಸುತ್ತದೆ. ಈ ಚಿತ್ರದಲ್ಲಿ ಬರಹಗಾರ, ನಿರ್ದೇಶಕ ಮತ್ತು ನಟನಾಗಿ ನಿಮ್ಮ ದೃಷ್ಟಿಕೋನವು ಪರದೆಯ ಮೇಲೆ ನಿಜವಾಗಿಯೂ ತಲ್ಲೀನಗೊಳಿಸುವ ಅನುಭವ ನೀಡುತ್ತದೆ ಎಂದು ರಾಕಿಂಗ್ ಸ್ಟಾರ್ ಹಾಗೂ ರಾಧಿಕ ಪಂಡಿತ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸಿನಿಮಾದಲ್ಲಿ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಅದ್ಭುತವಾಗಿ ಅಭಿನಯಿಸಿದ್ದಾರೆ. ಅಜನೀಶ್ ಅವರ ಸಂಗೀತವು ಚಿತ್ರಕ್ಕೆ ಇನ್ನಷ್ಟು ಜೀವ ತುಂಬಿವೆ. ರಾಕೇಶ್ ಪೂಜಾರಿ ಅವರ ಪ್ರತಿಭೆಗೆ ಸೂಕ್ತವಾದ ಗೌರವ ಸಿಕ್ಕಿದೆ. ಅರವಿಂದ್ ಕಶ್ಯಪ್ ಅವರ ಅದ್ಭುತ ಕ್ಯಾಮೆರಾ ವರ್ಕ್, ಜಯರಾಮ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡ್ ಸೇರಿ ಇಡೀ ಚಿತ್ರತಂಡ ಹಾಗೂ ಸಿಬ್ಬಂದಿ ಸಿನಿಮಾಕ್ಕಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದು ನಟ ಯಶ್ ಸಿನಿಮಾ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.