
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ ಅಧ್ಯಾಯ–1’ ಸಿನಿಮಾವನ್ನು ಸಿನಿ ತಾರೆಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ನಟಿ ಖುಷ್ಬೂ ಸುಂದರ್ ಅವರು ಚಿತ್ರ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಖುಷ್ಬೂ, ‘ಕೊನೆಗೂ ರಿಷಬ್ ಅವರ ಮಾಸ್ಟರ್‌ಪೀಸ್ ಕಾಂತಾರ ಚಿತ್ರವನ್ನು ವೀಕ್ಷಿಸಿದೆ. ಸಿನಿಮಾವನ್ನು ನೋಡಿ ನಾನು ಮಂತ್ರಮುಗ್ದಳಾಗಿದ್ದೇನೆ. ಈ ಚಿತ್ರದಿಂದ ನಿಮ್ಮ ಮೇಲಿನ ಗೌರವ ಇನ್ನಷ್ಟು ಹೆಚ್ಚಾಗಿದೆ. ಈ ಸಿನಿಮಾವು ಭಾವನೆ, ಸಂಸ್ಕೃತಿ, ಸಂಪ್ರದಾಯ, ಪರಂಪರೆಗಳಿಂದ ಕೂಡಿದೆ. ಎಲ್ಲವನ್ನೂ ಅತ್ಯುತ್ತಮವಾಗಿ ರಚಿಸಿದ್ದೀರಾ. ಪ್ರತಿಭೆಯುಳ್ಳವರು ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಬೇಕು. ನೀವು ಇನ್ನಷ್ಟು ಒಳ್ಳೆಯ ಸಿನಿಮಾಗಳನ್ನು ಚಿತ್ರರಂಗಕ್ಕೆ ನೀಡಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.
ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ‘ಕಾಂತಾರ ಅಧ್ಯಾಯ–1’ ಜಾಗತಿಕ ಗಲ್ಲಾ ಪೆಟ್ಟಿಗೆಯಲ್ಲಿ ₹800 ಕೋಟಿಗೂ ಅಧಿಕ ಗಳಿಕೆ ಮಾಡಿದೆ ಎಂದು ಈ ಹಿಂದೆ ಚಿತ್ರತಂಡ ಬಹಿರಂಗ ಪಡಿಸಿತ್ತು.
ರುಕ್ಕಿಣಿ ವಸಂತ್ ಗುಲ್ಕನ್ ದೇವಯ್ಯ, ಜಯರಾಮ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡ್ ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.