ADVERTISEMENT

ತೆಲುಗಿನಲ್ಲಿ ‘ಕಾಂತಾರ’ ಅಬ್ಬರ: ಟ್ವಿಟರ್‌ನಲ್ಲಿ ಟ್ರೆಂಡ್ ಆಯ್ತು #KantaraTelugu

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಅಕ್ಟೋಬರ್ 2022, 6:58 IST
Last Updated 16 ಅಕ್ಟೋಬರ್ 2022, 6:58 IST
ಕಾಂತಾರ ಸಿನಿಮಾದಲ್ಲಿ ರಿಷಬ್‌ ಶೆಟ್ಟಿ
ಕಾಂತಾರ ಸಿನಿಮಾದಲ್ಲಿ ರಿಷಬ್‌ ಶೆಟ್ಟಿ   

ಹೈದರಾಬಾದ್: ನಟ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾಕ್ಕೆ ತೆಲುಗಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅ.15ರಂದು ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ಕಾಂತಾರ ಸಿನಿಮಾ ನೂರಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಸಿನಿಮಾ ವೀಕ್ಷಿಸಿದ ಪ್ರೇಕ್ಷಕರು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ವಿಟರ್‌ನಲ್ಲಿ #KantaraTelugu ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗಿದೆ.

ADVERTISEMENT

‘ನಾನು ನೋಡಿದ ಅತ್ಯುತ್ತಮ ಚಲನಚಿತ್ರಗಳಲ್ಲಿ ‘ಕಾಂತಾರ’ ಒಂದಾಗಿದೆ. ಅದರಲ್ಲೂ ಕ್ಲೈಮ್ಯಾಕ್ಸ್ ಅದ್ಭುತವಾಗಿದೆ’ ಎಂದು ಸಾಯ್‌ ಕೃಷ್ಣ ತೇಜ್ ಟ್ವೀಟ್ ಮಾಡಿದ್ದಾರೆ.

ಕಾಂತಾರ ಚಿತ್ರ ಬಿಡುಗಡೆಯಾದ ಮೊದಲ ದಿನವೇ ₹2 ಕೋಟಿ ಗಳಿಕೆ ಕಂಡಿದೆ. ಇದು ಯಾರೂ ನಿರೀಕ್ಷಿಸದ ಯಶಸ್ಸು ಎಂದು ಜೀವಿ ಎಂಬುವರು ಟ್ವೀಟ್ ಮಾಡಿದ್ದಾರೆ.

‘ಕಾಂತಾರ ಒಂದು ಅದ್ಭುತ ರಂಗಭೂಮಿಯ ಅನುಭವ ನೀಡಿತು’ ಎಂದು ಮಣಿಕಂಠ ಟ್ವೀಟ್‌ ಮಾಡಿದ್ದಾರೆ.

ತೆಲುಗು ಪ್ರಕ್ಷೇಕರು ಯಾವುದೇ ಭಾಷೆಯ ಭೇದವಿಲ್ಲದೆ ಒಳ್ಳೆಯ ಸಿನಿಮಾವನ್ನು ಯಾವಾಗಲೂ ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ ಎಂದು ಎಲ್‌.ಕೆ. ರಾಜ್‌ಕುಮಾರ್‌ ಹೇಳಿದ್ದಾರೆ.

‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ರಿಷಬ್‌ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಹೊಂಬಾಳೆ ಫಿಲಂಸ್‌ ಚಿತ್ರವನ್ನು ನಿರ್ಮಿಸಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.