ಬಹುತೇಕ ಹೊಸಬರಿಂದಲೇ ಕೂಡಿರುವ ‘ಕಪಟ ನಾಟಕ ಸೂತ್ರಧಾರಿ’ ಚಿತ್ರದ ಫಸ್ಟ್‌ಲುಕ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಟ ಡಾಲಿ ಧನಂಜಯ ಪೋಸ್ಟರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಧೀರಜ್ ಎಂ.ವಿ ಈ ಚಿತ್ರದ ನಿರ್ದೇಶಕ.
‘ಈ ಸಮಾಜಕ್ಕೆ ಕನ್ನಡಿ ಹಿಡಿಯುವ ಕಥೆ. ಇಲ್ಲಿ ಹಾಸುಹೊಕ್ಕಾಗಿರುವ ತಾರತಮ್ಯ, ಶೋಷಣೆಗಳ ಕುರಿತಾಗಿ ಚಿತ್ರ ಬೆಳಕು ಚೆಲ್ಲುತ್ತದೆ. ರಾಜಕೀಯ ವಿಡಂಬನೆಯಿದೆ. ಬಹುಪಾಲು ಚಿತ್ರೀಕರಣ ಸಾವಿರ ವರ್ಷಗಳಷ್ಟು ಇತಿಹಾಸ ಹೊಂದಿರುವ ಉತ್ತರ ಕರ್ನಾಟಕದ ದೇವಸ್ಥಾನವೊಂದರ ಆವರಣದಲ್ಲಿ ನಡೆದಿದೆ. ದೇವಸ್ಥಾನದ ಹೆಸರನ್ನು ಉದ್ದೇಶಪೂರ್ವಕವಾಗಿ ಬಹಿರಂಗಪಡಿಸುತ್ತಿಲ್ಲ. ಈಗ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ’ ಎಂದರು ನಿರ್ದೇಶಕರು.
ವಿಎಸ್‌ಕೆ ಸಿನಿಮಾಸ್ ಚಿತ್ರವನ್ನು ನಿರ್ಮಿಸಿದೆ. ಧೀರಜ್, ಅಭಿರಾಮ ಅರ್ಜುನ ಪ್ರಮುಖ ಪಾತ್ರಗಳಲ್ಲಿದ್ದಾರೆ. ನೂರಕ್ಕೂ ಹೆಚ್ಚು ಮಂದಿ ಕಲಾವಿದರು ಈ ಚಿತ್ರದ ತಾರಾಗಣದಲ್ಲಿದ್ದಾರೆ. ವೀರೇಶ್ ಎನ್. ಟಿ.ಎ ಛಾಯಾಚಿತ್ರಗ್ರಹಣ, ಪ್ರಸನ್ನ ಕುಮಾರ್ ಎಂ.ಎಸ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.