ADVERTISEMENT

ಯುಟ್ಯೂಬ್‌ನಲ್ಲಿ ಧೂಳೆಬ್ಬಿಸುತ್ತಿದೆ ‘ಕಾಪ್ಪಾನ್‌’

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2019, 19:30 IST
Last Updated 9 ಸೆಪ್ಟೆಂಬರ್ 2019, 19:30 IST
ಸೂರ್ಯ
ಸೂರ್ಯ   

ಮಾಲಿವುಡ್‌ ಮತ್ತು ಕಾಲಿವುಡ್‌ನಲ್ಲಿ ಕುತೂಹಲ ಹುಟ್ಟಿಸಿರುವ ಚಿತ್ರ ‘ಕಾಪ್ಪಾನ್‌’ ಇದೇ 20ರಂದು ಚಿತ್ರಮಂದಿರಗಳಿಗೆ ಲಗ್ಗೆಯಿಡಲಿದೆ.

ಚಿತ್ರದ ಟ್ರೇಲರ್‌ ಈಗಾಗಲೇ ಬಿಡುಗಡೆಯಾಗಿದ್ದು, ಕೆಲವೇ ದಿನಗಳಲ್ಲಿ ಕೋಟ್ಯಂತರ ಅಭಿಮಾನಿಗಳು ವೀಕ್ಷಿಸಿದ್ದಾರೆ. ಅಲ್ಲದೆ ಯೂಟ್ಯೂಬ್‌ನಲ್ಲಿ ‘ಕಾಪ್ಪಾನ್‌’ ಟ್ರೆಂಡ್ ಸೃಷ್ಟಿಸಿದೆ.

ಪೊಲಿಟಿಕಲ್‌ ಸಸ್ಪೆನ್ಸ್‌ ಥ್ರಿಲ್ಲರ್‌ ಆಗಿದ್ದ ‘ಲೂಸಿಫರ್‌’ನಲ್ಲಿ ತಣ್ಣಗಿನ ಕ್ರೌರ್ಯದೊಂದಿಗೆ ಅಬ್ಬರಿಸಿದ್ದ ಮೋಹನ್‌ಲಾಲ್‌ ಮತ್ತೊಮ್ಮೆ ಅಂತಹುದೇ ಚಿತ್ರಕತೆಯುಳ್ಳ ‘ಕಾಪ್ಪಾನ್‌’ನಲ್ಲಿ ಪ್ರಧಾನ ಪಾತ್ರದಲ್ಲಿ ಚಿತ್ರವನ್ನು ಆವರಿಸಿಕೊಂಡಿದ್ದಾರೆ. ತಮಿಳಿನ ಅಗ್ರನಟ ಸೂರ್ಯನ ಸ್ಟೈಲಿಶ್‌ ಲುಕ್‌ಗೆ ವೀಕ್ಷಕರು ಫಿದಾ ಆಗಿದ್ದಾರೆ.

ADVERTISEMENT

ಕೆ.ವಿ.ಆನಂದ್‌ ನಿರ್ದೇಶನ ಈ ಚಿತ್ರದಲ್ಲಿ ನಾಯಕಿಯಾಗಿ ಸಯೇಶಾ ಸೈಗಲ್ ಕಾಣಿಸಿಕೊಂಡಿದ್ದಾರೆ. ಹ್ಯಾರೀಸ್‌ ಜಯರಾಜ್‌ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.ಏಪ್ರಿಲ್‌ನಲ್ಲಿ ಟೀಸರ್‌ ಬಿಡುಗಡೆ ಮಾಡಿದ್ದ ಚಿತ್ರ ತಂಡ ವೀಕ್ಷಕರಲ್ಲಿ ಕುತೂಹಲ ಕೆರಳಿಸಿತ್ತು.

ಯುಟ್ಯೂಬ್‌ ಟ್ರೇಲರ್‌ ಲಿಂಕ್‌: https://www.youtube.com/watch?v=j_eduSGN3RQ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.