
‘ಕರಿಕಾಡ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿ 2 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ.
ವಿಭಿನ್ನ ಶೀರ್ಷಿಕೆ ಅಡಿಯಲ್ಲಿ ಮೂಡಿಬಂದ ‘ಕರಿಕಾಡ’ ಚಿತ್ರದ ಟ್ರೇಲರ್ ಲಹರಿ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿತ್ತು. ಟ್ರೇಲರ್ ಮೇಕಿಂಗ್‌ನಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಈ ಚಿತ್ರದಲ್ಲಿ ಕಾಡ ನಟರಾಜ್ ನಾಯಕನಾಗಿ, ನಿರೀಕ್ಷಾ ಶೆಟ್ಟಿ ನಾಯಕಿಯಾಗಿ ನಟಿಸಿದ್ದಾರೆ.
ಈ ಚಿತ್ರವು ಫೆಬ್ರುವರಿ 6ರಂದು ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ತೆರೆ ಕಾಣಲಿದೆ. ಚಿತ್ರದ ‘ರತುನಿ ರತುನಿ’ ಹಾಗೂ ‘ಕಬ್ಬಿನ ಜಿಲ್ಲೆ’ ಹಾಡುಗಳು ಬಿಡುಗಡೆಯಾಗಿ ಪ್ರೇಕ್ಷಕರ ಗಮನ ಸೆಳೆದಿದೆ. ಚಿತ್ರದ ಚಿತ್ರೀಕರಣ ಚಿಕ್ಕಮಗಳೂರು, ಕಳಸ, ಕುದುರೆ ಮುಖ, ಮಂಡ್ಯ ಸೇರಿ ಇತರೆ ಕಡೆಗಳಲ್ಲಿ ನಡೆದಿದೆ.
ರಿದ್ದಿ ಎಂಟರ್ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ, ದೀಪ್ತಿ ದಾಮೋದರ್ ನಿರ್ಮಾಣದ ಈ ಚಿತ್ರಕ್ಕೆ ಗಿಲ್ಲಿ ವೆಂಕಟೇಶ್ ಅವರು ಆಕ್ಷನ್ ಕಟ್ ಹೇಳಿದ್ದಾರೆ. ಅತಿಶಯ್ ಜೈನ್ ಹಾಗೂ ಶಶಾಂಕ್ ಶೇಷಗಿರಿ ಅವರ ಸಂಗೀತ, ಜೀವನ್ ಗೌಡ ಛಾಯಾಗ್ರಹಣ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.