ನವದೆಹಲಿ: ದಿವಂಗತ ಸಂಜಯ್ ಕಪೂರ್ ಅವರ ಆಸ್ತಿಯಲ್ಲಿ ಪಾಲು ಕೇಳಿ ಬಾಲಿವುಡ್ ನಟಿ ಕರಿಷ್ಮಾ ಕಪೂರ್ ಅವರ ಇಬ್ಬರು ಮಕ್ಕಳು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಕಪೂರ್ ಅವರ ಉಯಿಲು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸೆಪ್ಟೆಂಬರ್ 10ರಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ.
‘ಸಂಜಯ್ ಕಪೂರ್ ಅಥವಾ ಮಲತಾಯಿ ಪ್ರಿಯಾ ಕಪೂರ್ ಅವರು ಅಥವಾ ಬೇರೆ ಯಾವುದೇ ವ್ಯಕ್ತಿ ಉಯಿಲು ಇದೆ ಎಂಬ ಬಗ್ಗೆ ಎಲ್ಲೂ ಪ್ರಸ್ತಾಪಿಸಿಲ್ಲ’ ಎಂದು ದೂರುದಾರರು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.