ADVERTISEMENT

ರಾಜ್ಯ ಬಜೆಟ್‌ನಲ್ಲಿ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಫೆಬ್ರುವರಿ 2023, 11:12 IST
Last Updated 17 ಫೆಬ್ರುವರಿ 2023, 11:12 IST
   

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿರುವ ಬಜೆಟ್‌ನಿಂದ ಕನ್ನಡ ಚಿತ್ರರಂಗಕ್ಕೆ ನಿರಾಸೆಯಾಗಿದೆ.

ಹೌದು, ಏಕೆಂದರೆ ಈ ಬಾರಿಯ ಬಜೆಟ್‌ನಲ್ಲಿ ಕನ್ನಡ ಚಿತ್ರರಂಗದ ಪ್ರಮುಖ ಬೇಡಿಕೆಯಾದ ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು ಎಂಬುದಕ್ಕೆ ಯಾವುದೇ ಸ್ಪಂದನೆ ಸಿಕ್ಕಿಲ್ಲ.

ಕೊರೊನಾ ನಂತರ ಸಿನಿಮಾ ಮಂದಿರಗಳಿಗೆ ಹೋಗಿ ಸಿನಿಮಾ ನೋಡುವ ಹವ್ಯಾಸ ಜನರಲ್ಲಿ ಕಡಿಮೆಯಾಗಿರುವುದರಿಂದ ಎರಡು, ಮೂರನೇ ಹಂತದ ನಗರಗಳಲ್ಲಿ ಸಿನಿಮಾ ಮಂದಿರಗಳು ಹಾಳು ಬೀಳುತ್ತಿವೆ. ಹೀಗಾಗಿ ರಾಜ್ಯ ಸರ್ಕಾರವೇ ಮುಂದೆ ನಿಂತು ಈ ನಗರಗಳಲ್ಲಿ 100 ರಿಂದ 200 ಆಸನಗಳುಳ್ಳ ಮಿನಿ ಥಿಯೇಟರ್‌ಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಬಜೆಟ್ ನಲ್ಲಿ ತಿಳಿಸಲಾಗಿದೆ.

ADVERTISEMENT

ಇದನ್ನು ಬಿಟ್ಟರೇ 200 ಚಿತ್ರಗಳಿಗೆ ಈ ವರ್ಷದಲ್ಲಿ ಸಬ್ಸಿಡಿ ನೀಡುವ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಒಟ್ಟಾರೆ ಈ ಸಾರಿಯ ಬಜೆಟ್‌ನಲ್ಲಿ ಕನ್ನಡ ಚಿತ್ರರಂಗವನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂಬ ಅಭಿಪ್ರಾಯಗಳು ಕೇಳಿ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.