ಬೆಂಗಳೂರು: 2021ನೇ ಸಾಲಿನ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಶುಕ್ರವಾರ ಪ್ರಕಟಗೊಂಡಿದ್ದು, ರಕ್ಷಿತ್ ಶೆಟ್ಟಿ ಅವರು ‘ಚಾರ್ಲಿ 777’ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದು, ಅರ್ಚನಾ ಜೋಯ್ಸ್ ‘ಮ್ಯೂಟ್’ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ದಿವಂಗತ ಪುನೀತ್ ರಾಜ್‌ಕುಮಾರ್ ನಟನೆಯ ‘ಯುವರತ್ನ’ ಅತ್ಯುತ್ತಮ ಮನರಂಜನಾ ಚಿತ್ರ’ ಎಂಬ ಹಿರಿಮೆಗೆ ಪಾತ್ರವಾಗಿದೆ.
ರಘು ಕೆ.ಎಂ ನಿರ್ದೇಶನದ ‘ದೊಡ್ಡಹಟ್ಟಿ ಬೋರೇಗೌಡ’ ಮೊದಲನೇ ಅತ್ಯುತ್ತಮ ಚಿತ್ರವಾಗಿದ್ದು, ಕಿರಣ್ ರಾಜ್ ನಿರ್ದೇಶನದ ‘ಚಾರ್ಲಿ 777’ ಎರಡನೇ ಅತ್ಯುತ್ತಮ ಚಿತ್ರವಾಗಿ ಹೊರಹೊಮ್ಮಿದೆ.
ಹೃದಯ ಶಿವ ನಿರ್ದೇಶನದ ‘ಬಿಸಿಲು ಕುದುರೆ’ ಮೂರನೇ ಅತ್ಯುತ್ತಮ ಚಿತ್ರವಾಗಿದೆ. ಕೃಷ್ಣಮೂರ್ತಿ ಚರಂ ನಿರ್ದೇಶನದ ‘ಭಾರತೀಯ ಪ್ರಜೆಗಳಾದ ನಾವು’ ಅತ್ಯುತ್ತಮ ಸಾಮಾಜಿಕ ಕಳಕಳಿಯ ಚಿತ್ರವಾಗಿ ಆಯ್ಕೆಗೊಂಡಿದೆ.
‘ರತ್ನನ ಪ್ರಪಂಚ’ ಚಿತ್ರಕ್ಕಾಗಿ ಪ್ರಮೋದ್ ಅತ್ಯುತ್ತಮ ಪೋಷಕ ನಟ ಹಾಗೂ ಉಮಾಶ್ರೀ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪತ್ರಕರ್ತ ಸದಾಶಿವ ಶೆಣೈ ಅಧ್ಯಕ್ಷತೆಯಲ್ಲಿ ಆಯ್ಕೆ ಸಲಹಾ ಸಮಿತಿ ರಚಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.