ADVERTISEMENT

ಪದ್ಮಭೂಷಣ ಪ್ರಶಸ್ತಿ ಕರ್ನಾಟಕದ ಜನತೆಗೆ ಅರ್ಪಿಸಿದ ನಟ ಅನಂತನಾಗ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜನವರಿ 2025, 7:25 IST
Last Updated 26 ಜನವರಿ 2025, 7:25 IST
<div class="paragraphs"><p>ಅನಂತನಾಗ್</p></div>

ಅನಂತನಾಗ್

   

ಬೆಂಗಳೂರು: 'ಪದ್ಮಭೂಷಣ' ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್, ಈ ಪ್ರಶಸ್ತಿಯನ್ನು ಕರ್ನಾಟಕದ ಜನರಿಗೆ ಅರ್ಪಿಸುವುದಾಗಿ ತಿಳಿಸಿದ್ದಾರೆ.

ಈ ಕುರಿತು ಅನಂತನಾಗ್ ನೀಡಿರುವ ಸಂದರ್ಶನದ ವಿಡಿಯೊವನ್ನು ಪಿಟಿಐ 'ಎಕ್ಸ್'ನಲ್ಲಿ ಹಂಚಿಕೊಂಡಿದೆ.

ADVERTISEMENT

'ಕನ್ನಡ ಚಿತ್ರರಂಗದಲ್ಲಿ 50 ವರ್ಷಗಳ ಪಯಣ ನನ್ನದಾಗಿದೆ. ಅದಕ್ಕೂ ಮುನ್ನ ಐದು ವರ್ಷಗಳ ಕಾಲ ರಂಗಭೂಮಿಯಲ್ಲಿದ್ದೆ. ಬಳಿಕ ಚಿತ್ರರಂಗಕ್ಕೆ ಕಾಲಿರಿಸಿದ್ದೆ' ಎಂದು ಅವರು ತಿಳಿಸಿದ್ದಾರೆ.

'ಕನ್ನಡಿಗರು ನನ್ನ ಮೇಲೆ ಅತೀವ ಪ್ರೀತಿ ತೋರಿದ್ದಾರೆ. ಕಳೆದ ಮೂರು ವರ್ಷಗಳಿಂದ ನನ್ನ ಹೆಸರನ್ನು ಸೂಚಿಸಲಾಗಿದೆ. ಕೊನೆಗೂ ಪ್ರಶಸ್ತಿ ಬಂದಿರುವುದಕ್ಕೆ ಸಂತಸಗೊಂಡಿದ್ದು, ಈ ಗೌರವವನ್ನು ಕರ್ನಾಟಕದ ಜನರಿಗೆ ಅರ್ಪಿಸುತ್ತೇನೆ' ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವದ ಸಂಭ್ರಮದ ವೇಳೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಈ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಶನಿವಾರ ಪ್ರಕಟಿಸಿತು. ಹೆಸರಾಂತ ವಯೊಲಿನ್ ವಾದಕ ಲಕ್ಷ್ಮೀ ನಾರಾಯಣ ಸುಬ್ರಮಣಿಯಂ, ಹಿರಿಯ ನಟ ಅನಂತನಾಗ್, ಪ್ರಸಿದ್ಧ ವೈದ್ಯೆ ವಿಜಯಲಕ್ಷ್ಮೀ ದೇಶಮಾನೆ, ತೊಗಲು ಬೊಂಬೆಯಾಟದ ಹಿರಿಯ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಸೇರಿ ರಾಜ್ಯದ 9 ಮಹನೀಯರು ಈ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.