
ಬೆಂಗಳೂರು: ಸಿನಿಮಾ ನಟಿ, ಬಿಗ್‌ಬಾಸ್ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ಕಾರುಣ್ಯ ರಾಮ್ ಅವರು ತಮ್ಮ ಸಹೋದರಿ ಸಮೃದ್ಧಿ ರಾಮ್ ಅವರ ವಿರುದ್ಧ ವಂಚನೆಯ ದೂರು ನೀಡಿದ್ದಾರೆ. ದೂರು ಪಡೆದಿರುವ ಸಿಸಿಬಿ ಪರಿಶೀಲನೆ ನಡೆಸುತ್ತಿದೆ.
ಮೇಕಪ್ ಕಲಾವಿದೆ ಆಗಿರುವ ತಂಗಿ ಸಮೃದ್ಧಿ ರಾಮ್, ಅವರ ಸ್ನೇಹಿತರಾದ ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ್ ಎಂಬುವವರ ವಿರುದ್ಧ ಕಾರುಣ್ಯ ದೂರು ನೀಡಿದ್ದಾರೆ.
ಸಮೃದ್ಧಿ ರಾಮ್ ಅವರು ಬೆಟ್ಟಿಂಗ್ ಆಡಿ ಸುಮಾರು ₹ 25 ಲಕ್ಷ ಸಾಲ ಮಾಡಿಕೊಂಡಿದ್ದಾರೆ. ಸಾಲ ತೀರಿಸಲು ಮನೆಯಲ್ಲಿದ್ದ ಚಿನ್ನ ಹಾಗೂ ಹಣವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಕಾರುಣ್ಯ ಉಲ್ಲೇಖಿಸಿದ್ದಾರೆ.
ಈ ಹಿಂದೆಯೇ ಕಾರುಣ್ಯ ರಾಮ್ ಅವರು ಸಮೃದ್ಧಿ ವಿರುದ್ಧ ನೀಡಿದ್ದ ದೂರು ಆಧರಿಸಿ ಆರ್.ಆರ್. ನಗರ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿತ್ತು. ಇದೀಗ ವಂಚನೆ, ಬೆದರಿಕೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.