ADVERTISEMENT

ಗಂಡು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಕತ್ರಿನಾ ಕೈಫ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ನವೆಂಬರ್ 2025, 6:15 IST
Last Updated 7 ನವೆಂಬರ್ 2025, 6:15 IST
<div class="paragraphs"><p>ನಟಿ ಕತ್ರಿನಾ ಕೈಫ್ ದಂಪತಿ</p></div>

ನಟಿ ಕತ್ರಿನಾ ಕೈಫ್ ದಂಪತಿ

   

ಚಿತ್ರ: ಇನ್‌ಸ್ಟಾಗ್ರಾಮ್

ಬಾಲಿವುಡ್‌ ನಟಿ ಕತ್ರಿನಾ ಕೈಫ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹೀಗಾಗಿ ನಟಿ ಕತ್ರಿನಾ ಕೈಫ್ ಮತ್ತು ನಟ ವಿಕ್ಕಿ ಕೌಶಲ್‌ ನಿವಾಸದಲ್ಲಿ ಸಂಭ್ರಮ ಮನೆ ಮಾಡಿದೆ.

ADVERTISEMENT

ಈ ವಿಚಾರವನ್ನು ನಟಿ ಕತ್ರಿನಾ ಕೈಫ್ ಮತ್ತು ನಟ ವಿಕ್ಕಿ ಕೌಶಲ್‌ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ದಂಪತಿ ವಿಶೇಷ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ‘ಅಪಾರ ಪ್ರೀತಿ ಮತ್ತು ಕೃತಜ್ಞತೆಯಿಂದ ನಾವು ನಮ್ಮ ಗಂಡು ಮಗುವನ್ನು ಸ್ವಾಗತಿಸುತ್ತೇವೆ’ ಎಂದು ಬರೆದುಕೊಂಡಿದ್ದಾರೆ.

42ನೇ ವಯಸ್ಸಿನಲ್ಲಿ ತಾಯಿಯಾದ ನಟಿ ಕತ್ರಿನಾ ಕೈಫ್ ಸಾಮಾಜಿಕ ಜಾಲತಾಣದಲ್ಲಿ ಬೇಬಿ ಬಂಪ್‌ ಫೋಟೊವನ್ನು ಹಂಚಿಕೊಂಡಿದ್ದರು. ಜೊತೆಗೆ ‘ನಮ್ಮ ಜೀವನದ ಅತ್ಯುತ್ತಮ ಅಧ್ಯಾಯವನ್ನು ಸಂತೋಷ ಮತ್ತು ಕೃತಜ್ಞತೆಯಿಂದ ತುಂಬಿದ ಮನಸ್ಸುಗಳೊಂದಿಗೆ ಪ್ರಾರಂಭಿಸುವ ಹಾದಿಯಲ್ಲಿದ್ದೇವೆ’ ಎಂದು ಬರೆದುಕೊಂಡಿದ್ದರು.

ಇದೇ ವರ್ಷ ಮಾರ್ಚ್ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದರು. ನಟಿ ಕತ್ರಿನಾ ಕೈಫ್ ಮತ್ತು ನಟ ವಿಕ್ಕಿ ಕೌಶಲ್ 2021ರ ಡಿಸೆಂಬರ್ 9ರಂದು ಮದುವೆಯಾಗಿದ್ದರು. ಇದೀಗ ನಟಿ ಕತ್ರಿನಾ ಕೈಫ್ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.