ಚಿತ್ರ: katrinakaif
ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ನಟ ವಿಕ್ಕಿ ಕೌಶಲ್ ನಿವಾಸದಲ್ಲಿ ಸಂಭ್ರಮ ಮನೆ ಮಾಡಿದೆ. ಈ ಜನಪ್ರಿಯ ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಚಿತ್ರ: katrinakaif
42ನೇ ವಯಸ್ಸಿನಲ್ಲಿ ತಾಯಿಯಾಗುತ್ತಿರುವ ನಟಿ ಕತ್ರಿನಾ ಕೈಫ್ ಸಾಮಾಜಿಕ ಜಾಲತಾಣದಲ್ಲಿ ಬೇಬಿ ಬಂಪ್ ಫೋಟೊವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ‘ನಮ್ಮ ಜೀವನದ ಅತ್ಯುತ್ತಮ ಅಧ್ಯಾಯವನ್ನು ಸಂತೋಷ ಮತ್ತು ಕೃತಜ್ಞತೆಯಿಂದ ತುಂಬಿದ ಮನಸುಗಳೊಂದಿಗೆ ಪ್ರಾರಂಭಿಸುವ ಹಾದಿಯಲ್ಲಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.
ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ನಟ ವಿಕ್ಕಿ ಕೌಶಲ್ 2021ರ ಡಿಸೆಂಬರ್ 9ರಂದು ಮದುವೆಯಾಗಿದ್ದರು. ಈ ಹಿಂದೆ ಕೂಡ ನಟಿ ಕತ್ರಿನಾ ಕೈಫ್ ಗರ್ಭಿಣಿ ಎಂದು ಸಾಮಾಜಿಕ ಜಾಲತಾಣದಲ್ಲಿ ಗಾಳಿ ಸುದ್ದಿ ಹರಿದಾಡುತ್ತಲೇ ಇತ್ತು. ಇದೀಗ ಈ ಜೋಡಿ ಅಧಿಕೃತವಾಗಿ ಪಾಲಕರಾಗಿ ಬಡ್ತಿ ಹೊಂದುತ್ತಿರುವುದರ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.