ADVERTISEMENT

ಇನ್‌ಸ್ಟಾಗ್ರಾಂನಲ್ಲಿ ಸಂಡೇ ಸೆಲ್ಫಿ ಹಂಚಿಕೊಂಡ ಕತ್ರಿನಾ: ಅಭಿಮಾನಿಗಳಿಂದ ಮೆಚ್ಚುಗೆ

ಐಎಎನ್ಎಸ್
Published 16 ಜನವರಿ 2022, 10:07 IST
Last Updated 16 ಜನವರಿ 2022, 10:07 IST
ಕತ್ರಿನಾ ಕೈಫ್‌ ಮತ್ತು ವಿಕ್ಕಿ ಕೌಶಲ್‌ (ಇನ್‌ಸ್ಟಾಗ್ರಾಂ ಚಿತ್ರ)
ಕತ್ರಿನಾ ಕೈಫ್‌ ಮತ್ತು ವಿಕ್ಕಿ ಕೌಶಲ್‌ (ಇನ್‌ಸ್ಟಾಗ್ರಾಂ ಚಿತ್ರ)   

ಮುಂಬೈ: ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಅವರು ಇಂದೋರ್‌ನ ಹೋಟೆಲ್‌ವೊಂದರಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ನೋಡಿರುವ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕತ್ರಿನಾ ಅವರು ಕೆಂಪು ಶರ್ಟ್ ಧರಿಸಿ ಕ್ಯಾಮರಾಗೆ ಪೋಸ್‌ ನೀಡಿರುವ ಫೋಟೊವನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದು, ‘ಇಂದೋರ್ಸ್‌ ಇನ್‌??? #Sundayselfie’ ಎಂದು ಬರೆದುಕೊಂಡಿದ್ದಾರೆ.

ಕತ್ರಿನಾ, ಪತಿ ವಿಕ್ಕಿ ಕೌಶಲ್‌ ಅವರೊಂದಿಗೆ ಲೋಹ್ರಿ ಆಚರಿಸಲು ಮುಂಬೈನಿಂದ ಇಂದೋರ್‌ಗೆ ತೆರಳಿದ್ದಾರೆ.

ADVERTISEMENT

ಲಕ್ಷ್ಮಣ್‌ ಉಟೇಕರ್‌ ನಿರ್ದೇಶನದ ಚಿತ್ರದಲ್ಲಿ ವಿಕ್ಕಿ ಕೌಶಲ್‌ ಅಭಿನಯಿಸುತ್ತಿದ್ದಾರೆ. ಇತ್ತ ಕತ್ರಿನಾ ‘ಮೆರ್ರಿ ಕ್ರಿಸ್ಮಸ್’, ಸಲ್ಮಾನ್ ಖಾನ್ ಅಭಿನಯದ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.