ADVERTISEMENT

ನ್ಯೂಯಾರ್ಕ್‌ನಲ್ಲಿರುವ ಪ್ರಿಯಾಂಕಾ ರೆಸ್ಟೋರೆಂಟ್‌ಗೆ ವಿಕ್ಕಿ– ಕತ್ರಿನಾ ಭೇಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಮೇ 2022, 8:45 IST
Last Updated 13 ಮೇ 2022, 8:45 IST
ಕತ್ರಿನಾ ಕೈಫ್ –ವಿಕ್ಕಿ ಕೌಶಲ್‌ (ಇನ್‌ಸ್ಟಾಗ್ರಾಮ್‌ ಚಿತ್ರ)
ಕತ್ರಿನಾ ಕೈಫ್ –ವಿಕ್ಕಿ ಕೌಶಲ್‌ (ಇನ್‌ಸ್ಟಾಗ್ರಾಮ್‌ ಚಿತ್ರ)   

ಮುಂಬೈ: ಬಾಲಿವುಡ್‌ನ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಕತ್ರಿನಾ ಕೈಫ್ –ವಿಕ್ಕಿ ಕೌಶಲ್‌ ದಂಪತಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಈ ಜೋಡಿ, ಹಬ್ಬ, ಸಮಾರಂಭ, ಪ್ರವಾಸದ ವೇಳೆ ಕ್ಲಿಕ್ಕಿಸಿದ ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.

ಇದೀಗ ನ್ಯೂಯಾರ್ಕ್‌ ಪ್ರವಾಸ ಕೈಗೊಂಡಿರುವ ಕತ್ರಿನಾ –ವಿಕ್ಕಿ ದಂಪತಿ ನಟಿ ಪ್ರಿಯಾಂಕಾ ಚೋಪ್ರಾ ಮಾಲೀಕತ್ವದ ರೆಸ್ಟೋರೆಂಟ್‌ಗೆ (ಸೋನಾ ನ್ಯೂಯಾರ್ಕ್) ಭೇಟಿ ನೀಡುವ ಮೂಲಕ ಗಮನ ಸೆಳೆದಿದ್ದಾರೆ.

ADVERTISEMENT

ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೊ ಹಂಚಿಕೊಂಡಿರುವ ಕತ್ರಿನಾ ಕೈಫ್, ‘ಮನೆಯಿಂದ ದೂರದಲ್ಲಿರುವ ‘ಸೋನಾ ನ್ಯೂಯಾರ್ಕ್’ ರೆಸ್ಟೋರೆಂಟ್‌ ಅನ್ನು ಇಷ್ಟಪಟ್ಟಿದ್ದೇನೆ. ಪ್ರಿಯಾಂಕಾ ಚೋಪ್ರಾ ಅವರೇ, ನೀವು ಮಾಡುವ ಪ್ರತಿ ಕೆಲಸವೂ ಅದ್ಭುತವಾಗಿರುತ್ತದೆ ಎಂದು ಬರೆದುಕೊಂಡಿದ್ದರು. ಈ ಪೋಸ್ಟ್‌ಗೆ ಪ್ರಿಯಾಂಕಾ ಚೋಪ್ರಾ ಪ್ರತಿಕ್ರಿಯಿಸಿದ್ದು, ‘ಲವ್ ಯೂ ಹನಿ! ನಿಮ್ಮನ್ನು ನೋಡಿ ತುಂಬಾ ಸಂತೋಷವಾಗಿದೆ. ಸೋನಾ ನ್ಯೂಯಾರ್ಕ್ (ರೆಸ್ಟೋರೆಂಟ್‌) ನಿಮ್ಮನ್ನು ಯಾವಾಗಲೂ ಸ್ವಾಗತಿಸುತ್ತದೆ...’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಫರ್ಹಾನ್ ಅಖ್ತರ್ ಆ್ಯಕ್ಷನ್ ಕಟ್‌ ಹೇಳುತ್ತಿರುವ ‘ಜೀ ಲೇ ಝರಾ’ ಚಿತ್ರದಲ್ಲಿ ಕತ್ರಿನಾ ಕೈಫ್, ಪ್ರಿಯಾಂಕಾ ಚೋಪ್ರಾ ಹಾಗೂ ಆಲಿಯಾ ಭಟ್ ಒಟ್ಟಿಗೆ ನಟಿಸುತ್ತಿದ್ದಾರೆ.

2021ರ ಡಿ. 9ರಂದು ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ನಟ ವಿಕ್ಕಿ ಕೌಶಲ್‌ ಮತ್ತು ಕತ್ರಿನಾ ಕೈಫ್ ಅದ್ಧೂರಿಯಾಗಿ ವಿವಾಹವಾಗಿದ್ದರು.

ಸಲ್ಮಾನ್ ಖಾನ್ ಅಭಿನಯದ ‘ಟೈಗರ್ 3’ ಚಿತ್ರದಲ್ಲಿ ಕತ್ರಿನಾ ಕೈಫ್ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಲಕ್ಷ್ಮಣ್ ಉಟೇಕರ್ ನಿರ್ದೇಶನದ ಹೆಸರಿಡದ ಚಿತ್ರದಲ್ಲಿ ವಿಕ್ಕಿ ಕೌಶಲ್‌, ಸಾರಾ ಅಲಿ ಖಾನ್‌ ಅಭಿನಯಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.