ADVERTISEMENT

ಗಮನ ಸೆಳೆದ ‘ಕೆಡಿ’ ಚಿತ್ರದ ಅಣ್ತಮ್ಮ ಜೋಡೆತ್ತು ಕಣೋ ಹಾಡು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಡಿಸೆಂಬರ್ 2025, 9:40 IST
Last Updated 29 ಡಿಸೆಂಬರ್ 2025, 9:40 IST
   

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ‘ಅಣ್ತಮ್ಮ ಜೋಡೆತ್ತು ಕಣೋ‘ ಹಾಡು ಕೆಲ ದಿನಗಳ ಹಿಂದೆ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿತ್ತು. ಈ ಹಾಡು ಬಿಡುಗಡೆಯಾದ ಕೆಲವೇ ದಿನಗಳಲ್ಲಿ 1 ಕೋಟಿಗೂ ಅಧಿಕ ವೀಕ್ಷಣೆ ಕಂಡಿದೆ. ಈ ಹಿನ್ನೆಲೆ ಚಿತ್ರತಂಡ ಕೇಕ್ ಕತ್ತರಿಸಿ ಸಂಭ್ರಮಿಸಿದೆ.

‘ಅಣ್ತಮ್ಮ ಜೋಡೆತ್ತು ಕಣೋ‘ ಹಾಡಿಗೆ ನಿರ್ದೇಶಕ ಪ್ರೇಮ್ ಅವರೇ ಧ್ವನಿ ನೀಡಿದ್ದಾರೆ. ಅರ್ಜುನ್‌ ಜನ್ಯ ಸಂಗೀತ ಸಂಯೋಜನೆ ಮಾಡಿದ್ದರೆ, ಬಿ.ಎಸ್ ಮಂಜುನಾಥ್ ಅವರು ಸಾಹಿತ್ಯ ಬರೆದಿದ್ದಾರೆ.

ಈಗಾಗಲೇ ಈ ಚಿತ್ರದ  'ಶಿವ ಶಿವ‘,  ‘ಸೆಟ್ಟಗಲ್ಲ’ ಹಾಡುಗಳು ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿ ಕೋಟಿಗೂ ಅಧಿಕ ವೀಕ್ಷಣೆ ಕಂಡಿವೆ.

‘ಕೆಡಿ’ ಚಿತ್ರ 2026ರ ಏಪ್ರಿಲ್ 30ರಂದು ತೆರೆಕಾಣಲಿದೆ. ಧ್ರುವ ಸರ್ಜಾ, ಸಂಜಯ್ ದತ್, ರವಿಚಂದ್ರನ್, ರಮೇಶ್ ಅರವಿಂದ್, ರೀಷ್ಮಾ ನಾಣಯ್ಯ, ಶಿಲ್ಪಾ ಶೆಟ್ಟಿ ತಾರಾಗಣದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT