
ಜೋಗಿ ಪ್ರೇಮ್
ಚಿತ್ರ: ಇನ್‌ಸ್ಟಾಗ್ರಾಂ
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಬಗ್ಗೆ ನಿರ್ದೇಶಕ ಜೋಗಿ ಪ್ರೇಮ್ ಅವರು ಅಪ್‌ಡೇಟ್ ಒಂದನ್ನು ಕೊಟ್ಟಿದ್ದಾರೆ. ಸದ್ಯದಲ್ಲೇ ಬಹುನಿರೀಕ್ಷಿತ ಕೆಡಿ ಸಿನಿಮಾದ ಮೂರನೇ ಹಾಡು ಬಿಡುಗಡೆಯಾಗುತ್ತದೆ ಎಂದು ನಿರ್ದೇಶಕ ಜೋಗಿ ಪ್ರೇಮ್ ಅವರು ಮಾಹಿತಿ ಕೊಟ್ಟಿದ್ದಾರೆ.
ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಜೋಗಿ ಪ್ರೇಮ್ ವಿಡಿಯೊ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಕೆಡಿ ಸಿನಿಮಾ ಮೂರನೇ ಹಾಡು ಬಿಡುಗಡೆ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಇದೇ ಡಿಸೆಂಬರ್ 26ರ ಮಧ್ಯಾಹ್ನ 12.34ಕ್ಕೆ ‘ಅಣ್ತಮ್ಮ ಜೋಡೆತ್ತು ಕಣೋ’ ಹಾಡು ರಿಲೀಸ್ ಆಗಲಿದೆ ಎಂದು ಹೇಳಿದ್ದಾರೆ.
ಇನ್ನು, ಈ ಹಾಡು ಬಹು ಭಾಷೆಯಲ್ಲಿಯೇ ರಿಲೀಸ್ ಆಗುತ್ತಿದೆ. ಈಗಾಗಲೇ ಎಲ್ಲ ಭಾಷೆಯ ಪೋಸ್ಟರ್‌ಗಳನ್ನೂ ಜೋಗಿ ಪ್ರೇಮ್ ಹಂಚಿಕೊಂಡಿದ್ದಾರೆ. ಈಗಾಗಲೇ ಕೆಡಿ ಚಿತ್ರದ ಎರಡು ಹಾಡು ರಿಲೀಸ್ ಆಗಿವೆ. ಅದರಲ್ಲಿ ‘ಶಿವ ಶಿವ’ ಹಾಡು ರಿಲೀಸ್ ಆಗಿದೆ. ಇದಾದ ಬಳಿಕ ‘ಸೆಟ್ಟಾಗಲ್ಲ ಹೋಗೆ’ ಹಾಡು ಕೂಡ ರಿಲೀಸ್ ಆಗಿದೆ. ಈ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಹರಿದಾಡತ್ತು, ಹಾಗೂ ಎಲ್ಲರ ಗಮನ ಸೆಳೆದಿತ್ತು. ಕೆಡಿ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಇನ್ನಷ್ಟೇ ಘೋಷಿಸಬೇಕಿದ್ದು, ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಸಿನಿಮಾ ತೆರೆಕಾಣಲಿದೆ. ಸಿನಿಮಾದಲ್ಲಿ ಸುದೀಪ್ ಅವರೂ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ‘ಏಕ್ ಲವ್ ಯಾ’ ಸಿನಿಮಾ ನಂತರ ಪ್ರೇಮ್ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ ಇದಾಗಿದ್ದು, ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ಸಂಜಯ್ ದತ್, ರವಿಚಂದ್ರನ್, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್ ಚಿತ್ರದ ತಾರಾಬಳಗದಲ್ಲಿದ್ದಾರೆ.
‘ಕೆಡಿ’ ಸಿನಿಮಾದ ಟೀಸರ್ ಬಿಡುಗಡೆ: ಗಮನ ಸೆಳೆದ ಶಿಲ್ಪಾ ಶೆಟ್ಟಿ, ರಮೇಶ್ ಪಾತ್ರಗಳು
‘KD’–ಕಾಳಿದಾಸ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ. 1970-75ರ ಸಮಯದಲ್ಲಿ ನಡೆದ ನೈಜಘಟನೆ ಆಧಾರಿತ ಗ್ಯಾಂಗ್‌ಸ್ಟರ್ ಕಥೆ ಈ ಚಿತ್ರಲ್ಲಿದೆ. ಚಿತ್ರಕ್ಕಾಗಿ ಸುಮಾರು 180 ದಿನ ಚಿತ್ರೀಕರಣ ನಡೆಸಿದ್ದ ಚಿತ್ರತಂಡ ಹಂಗರಿ ರಾಜಧಾನಿ ಬುಡಾಪೆಸ್ಟ್‌ನಲ್ಲಿ ಚಿತ್ರದ ಬ್ಯಾಗ್ರೌಂಡ್ ಸ್ಕೋರ್ ಕೆಲಸವನ್ನು ನಡೆಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.