ADVERTISEMENT

‘ಕೆಡಿ’ ಸಿನಿಮಾದ ಟೀಸರ್ ಬಿಡುಗಡೆ: ಗಮನ ಸೆಳೆದ ಶಿಲ್ಪಾ ಶೆಟ್ಟಿ, ರಮೇಶ್ ಪಾತ್ರಗಳು

KD; The Devil ಪ್ರೇಮ್‌ ನಿರ್ದೇಶನದ, ಧ್ರುವ ಸರ್ಜಾ ಮುಖ್ಯಪಾತ್ರದಲ್ಲಿರುವ ‘ಕೆಡಿ’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಜುಲೈ 2025, 11:14 IST
Last Updated 10 ಜುಲೈ 2025, 11:14 IST
<div class="paragraphs"><p>‘ಕೆಡಿ’ ಸಿನಿಮಾದ ಟೀಸರ್ ಬಿಡುಗಡೆ: ಗಮನ ಸೆಳೆದ ಶಿಲ್ಪಾ ಶೆಟ್ಟಿ, ರಮೇಶ್ ಪಾತ್ರಗಳು</p></div>

‘ಕೆಡಿ’ ಸಿನಿಮಾದ ಟೀಸರ್ ಬಿಡುಗಡೆ: ಗಮನ ಸೆಳೆದ ಶಿಲ್ಪಾ ಶೆಟ್ಟಿ, ರಮೇಶ್ ಪಾತ್ರಗಳು

   

ಬೆಂಗಳೂರು: 2025ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಪ್ರೇಮ್‌ ನಿರ್ದೇಶನದ, ಧ್ರುವ ಸರ್ಜಾ ಮುಖ್ಯಪಾತ್ರದಲ್ಲಿರುವ ‘ಕೆಡಿ’ (KD; The Devil) ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.

‘ಆನಂದ್ ಆಡಿಯೊ’ ಯೂಟ್ಯೂಬ್ ಚಾನಲ್‌ನಲ್ಲಿ ಟೀಸರ್ ಲಭ್ಯವಿದ್ದು, ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಅದರಲ್ಲೂ ರಮೇಶ್ ಅರವಿಂದ್ ಅವರ ‘ಧರ್ಮ’ ಪಾತ್ರ ಹಾಗೂ ಶಿಲ್ಪಾ ಶೆಟ್ಟಿ ಅವರ ‘ಸತ್ಯವತಿ’ ಪಾತ್ರಗಳು ಗಮನ ಸೆಳೆದಿವೆ.

ADVERTISEMENT

ಇಂದು ಮುಂಬೈನಲ್ಲಿ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ನಿರ್ದೇಶಕ ಪ್ರೇಮ್, ಧ್ರುವ ಸರ್ಜಾ, ಶಿಲ್ಪಾ ಶೆಟ್ಟಿ, ಸಂಜಯ್ ದತ್, ರೀಷ್ಮಾ ನಾಣಯ್ಯ ಸೇರಿದಂತೆ ಚಿತ್ರದ ತಂತ್ರಜ್ಞರು ಭಾಗವಹಿಸಿದ್ದರು.

ಎಂದಿನಂತೆ ಧ್ರುವ ಸರ್ಜಾ ‘ಕೆಡಿ’ಯಲ್ಲೂ ಅಬ್ಬರಿಸಿದ್ದು ಟೀಸರ್‌ನ ಕೊನೆಯ ದೃಶ್ಯದಲ್ಲಿ ಪುಷ್ಪ–2 ಕ್ಲೈಮ್ಯಾಕ್ಸ್ ದೃಶ್ಯವನ್ನು ನೆನಪಿಸುವಂತೆ ದೃಶ್ಯವೊಂದು ಕಾಣಿಸಿಕೊಂಡಿರುವುದು ಧ್ರುವ ಅಭಿಮಾನಿಗಳನ್ನು ಸಿನಿಮಾಕ್ಕಾಗಿ ತುದಿಗಾಲ ಮೇಲೆ ನಿಲ್ಲುವಂತೆ ಮಾಡಿದೆ. ಬಾಲಿವುಡ್ ಮಂದಿಯ ಗಮನ ಸೆಳೆಯುವಂತೆ ಟ್ರೇಲರ್ ಲಾಂಚ್ ಮಾಡಲಾಗಿದೆ.

1970ರ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದ್ದು, ಮೋಹನ್ ಬಿ. ಕೆರೆ ಆಗಿನ ಬೆಂಗಳೂರಿನ ವಾತಾವರಣ ಹೋಲುವ ಅದ್ಭುತ ಸೆಟ್ ಹಾಕುವ ಮೂಲಕ ಸೃಷ್ಟಿಸಿದ್ದಾರೆ. 

ಈ ಚಿತ್ರ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕೆವಿಎನ್‌ ಪ್ರೊಡಕ್ಷನ್‌ ಈ ಸಿನಿಮಾ ನಿರ್ಮಿಸುತ್ತಿದೆ. ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತವಿದ್ದು, ವಿಲಿಯಂ ಡೇವಿಡ್‌ ಛಾಯಾಚಿತ್ರಗ್ರಹಣ, ಸಂಕೇತ್‌ ಆಚಾರ್‌ ಸಂಕಲನವಿದೆ. 

ಈ ಸಿನಿಮಾ ಮುಂದಿನ ವರ್ಷ ಯುಗಾದಿ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

‘ಏಕ್‌ ಲವ್‌ ಯಾ’ ಸಿನಿಮಾ ನಂತರ ಪ್ರೇಮ್ ನಿರ್ದೇಶನದ ಪ್ಯಾನ್‌ ಇಂಡಿಯಾ ಚಿತ್ರ ಇದಾಗಿದೆ. 20 ಎಕರೆ ಪ್ರದೇಶದಲ್ಲಿ ಪುರಭವನ, ಕೆ.ಆರ್‌.ಮಾರ್ಕೆಟ್‌, ಮೈಸೂರು ಬ್ಯಾಂಕ್‌, ಧರ್ಮರಾಯ ದೇವಸ್ಥಾನ, ಶಿವಾಜಿ ಟಾಕೀಸ್‌ ಸೆಟ್‌ ಹಾಕಿ ಚಿತ್ರದ ಬಹುತೇಕ ಭಾಗ ಚಿತ್ರೀಕರಣಗೊಂಡಿತ್ತು. ರೀಷ್ಮಾ ನಾಣಯ್ಯ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಬಾಲಿವುಡ್‌ನ ಸಂಜಯ್‌ ದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್‌, ರಮೇಶ್‌ ಅರವಿಂದ್‌, ರವಿಶಂಕರ್ ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.