ADVERTISEMENT

ಫೇಸ್‌ಬುಕ್‌ನಲ್ಲಿ ನಟಿ ಹನಿ ರೋಸ್‌ಗೆ ಅಶ್ಲೀಲ ಕಾಮೆಂಟ್‌; 60 ವರ್ಷದ ವ್ಯಕ್ತಿ ಬಂಧನ

ಪಿಟಿಐ
Published 7 ಜನವರಿ 2025, 10:49 IST
Last Updated 7 ಜನವರಿ 2025, 10:49 IST
<div class="paragraphs"><p>ಹನಿ ರೋಸ್ </p></div>

ಹನಿ ರೋಸ್

   

Credit: Facebook/Honey Rose

ಕೊಚ್ಚಿ: ಮಲಯಾಳಂ ನಟಿ ಹನಿ ರೋಸ್ ಅವರು ತಮ್ಮ ಫೇಸ್‌ಬುಕ್‌ ಪುಟದಲ್ಲಿ ಕೆಲವು ಕಿಡಿಗೇಡಿಗಳು ಅಶ್ಲೀಲ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿ ಇತ್ತೀಚೆಗೆ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ADVERTISEMENT

ಪ್ರಕರಣ ಸಂಬಂಧ ಹನಿ ರೋಸ್ ಅವರು ಇಂದು (ಮಂಗಳವಾರ) ಖುದ್ದಾಗಿ ಕೊಚ್ಚಿ ಸೆಂಟ್ರಲ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಘಟನೆ ಸಂಬಂಧ ಈಗಾಗಲೇ 30 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಒಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಹನಿ ರೋಸ್ ಅವರ ಅಧಿಕೃತ ಫೇಸ್‌ಬುಕ್‌ ಪುಟದಲ್ಲಿ ಅಶ್ಲೀಲ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿರುವವರನ್ನು ಗುರುತಿಸಲಾಗುತ್ತಿದೆ. ಕೆಲವರು ಈಗಾಗಲೇ ಕಾಮೆಂಟ್‌ಗಳನ್ನು ಡಿಲೀಟ್ ಮಾಡಿದ್ದಾರೆ. ಅಂತಹ ಪೋಸ್ಟ್‌ಗಳನ್ನು ರಿಸ್ಟೋರ್ ಮಾಡಲಾಗುತ್ತಿದೆ. ಆರೋಪಿಗಳನ್ನು ಗುರುತಿಸಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಪಣಂಗಾಡು ಮೂಲದ 60 ವರ್ಷದ ಶಾಜಿ ಎಂಬುವರನ್ನು ಬಂಧಿಸಲಾಗಿದೆ. ಉಳಿದ ಎಲ್ಲಾ ಆರೋಪಿಗಳ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 75 ಮತ್ತು ಸೆಕ್ಷನ್ 67 ಸೇರಿದಂತೆ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಹನಿ ರೋಸ್ ಅವರು ಮಲಯಾಳಂ, ತಮಿಳು ಮತ್ತು ತೆಲುಗಿನ ಕೆಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.