ಇತ್ತೀಚೆಗೆ ಗೋವಾದಲ್ಲಿ ನಡೆದ ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (ಇಫಿ) ಇಂಡಿಯನ್ ಪನೋರಮಾ ವಿಭಾಗದಲ್ಲಿ ಪ್ರದರ್ಶನಗೊಂಡ ‘ಕೆರೆಬೇಟೆ’ ಸಿನಿಮಾ ಶೀಘ್ರದಲ್ಲೇ ಕಿರುತೆರೆಯಲ್ಲಿ ಪ್ರಸಾರವಾಗಲಿದೆ.
ಪವನ್ ಒಡೆಯರ್ ಜೊತೆ ‘ಗೂಗ್ಲಿ’, ‘ರಣವಿಕ್ರಮ’, ‘ನಟಸಾರ್ವಭೌಮ’ ಹೀಗೆ ಹಲವು ಸಿನಿಮಾಗಳಲ್ಲಿ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದ ರಾಜ್‌ಗುರು ಬಿ. ಅವರ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದ್ದು, ಗೌರಿಶಂಕರ್ ನಾಯಕನಾಗಿ ನಟಿಸಿದ್ದಾರೆ. ಚಿತ್ರದ ಹಿಂದಿ ಡಬ್ಬಿಂಗ್ ಹಕ್ಕುಗಳು ಎರಡು ತಿಂಗಳ ಮುಂಚೆಯೇ ಮಾರಾಟವಾಗಿತ್ತು. ಇದೀಗ ಚಿತ್ರದ ತೆಲುಗು, ಮಲಯಾಳ, ತಮಿಳು ಡಬ್ಬಿಂಗ್ ಹಕ್ಕುಗಳು ಹಾಗೂ ಕನ್ನಡ ಅವತರಣಿಕೆಯ ಸ್ಯಾಟಲೈಟ್ ಡಿಜಿಟಲ್ ಹಕ್ಕುಗಳು ಒಳ್ಳೆಯ ಬೆಲೆಗೆ ಮಾರಾಟವಾಗಿದೆ ಎಂದು ಚಿತ್ರತಂಡ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.