ADVERTISEMENT

'ಕೆಜಿಎಫ್' ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ನಿಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ನವೆಂಬರ್ 2025, 6:45 IST
Last Updated 6 ನವೆಂಬರ್ 2025, 6:45 IST
<div class="paragraphs"><p>ನಟ ಹರೀಶ್ ರಾಯ್</p></div>

ನಟ ಹರೀಶ್ ರಾಯ್

   

ಚಿತ್ರ: ಇನ್‌ಸ್ಟಾಗ್ರಾಮ್

‘ಕೆಜಿಎಫ್’ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ಖಳನಾಯಕನಾಗಿ ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದ ನಟ ಹರೀಶ್ ರಾಯ್ (55) ಅವರು ಇಂದು (ಗುರುವಾರ) ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ.

ADVERTISEMENT

ಹರೀಶ್ ರಾಯ್ ಅವರು ಕಳೆದ ಕೆಲ ವರ್ಷಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಥೈರಾಯ್ಡ್ ಕ್ಯಾನ್ಸರ್‌ನಿಂದ ಹರೀಶ್ ರಾಯ್ ಅವರು ಗುರುತೇ ಸಿಗದಂತೆ ಆಗಿದ್ದರು. ಹೀಗಾಗಿ ನಟ ಯಶ್, ದರ್ಶನ್, ಧ್ರುವ ಸರ್ಜಾ ಸೇರಿದಂತೆ ಇನ್ನೂ ಹಲವರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ಹರೀಶ್ ಅವರು ಇಂದು ನಿಧನ ಹೊಂದಿದ್ದಾರೆ. ಕನ್ನಡದಲ್ಲಿ ‘ಓಂ’, ‘ನಲ್ಲ’ ‘ಕೆಜಿಎಫ್’, ‘ಕೆಜಿಎಫ್ 2’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.