ADVERTISEMENT

KGF 2 Twitter Review: ಯಶ್, ಪ್ರಶಾಂತ್‌ಗೆ ಅಭಿಮಾನಿಗಳ ಭರಪೂರ ಮೆಚ್ಚುಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಏಪ್ರಿಲ್ 2022, 8:25 IST
Last Updated 14 ಏಪ್ರಿಲ್ 2022, 8:25 IST
ಬೆಂಗಳೂರಿನ ವೀರೇಶ್ ಚಿತ್ರಮಂದಿರದಿಂದ ಮುಂದೆ ಡೊಳ್ಳುಕುಣಿತ
ಬೆಂಗಳೂರಿನ ವೀರೇಶ್ ಚಿತ್ರಮಂದಿರದಿಂದ ಮುಂದೆ ಡೊಳ್ಳುಕುಣಿತ   

ಬೆಂಗಳೂರು: ಪ್ಯಾನ್ ಇಂಡಿಯಾ ಸಿನಿಮಾ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್–ಚಾಪ್ಟರ್ 2‘ ಬುಧವಾರ ಮಧ್ಯರಾತ್ರಿ ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.

ಹೊಂಬಾಳೆ ಫಿಲಂಸ್ ನಿರ್ಮಾಣದ ಕೆಜಿಎಫ್ ಚಾಪ್ಟರ್ 2 ಸಿನಿಮಾದಲ್ಲಿ ಯಶ್ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಶ್ರೀನಿಧಿ ಶೆಟ್ಟಿ ನಾಯಕಿಯಾಗಿ, ಸಂಜಯ್ ದತ್, ರವೀನಾ ಟಂಡನ್, ಪ್ರಕಾಶ್ ರಾಜ್ ಮೊದಲಾದವರು ಅಭಿನಯಿಸಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್–ಚಾಪ್ಟರ್ 2 ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕನ್ನಡ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ತುಂಬಿದ ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುತ್ತಿದೆ.

ADVERTISEMENT

ಚಿತ್ರ ವೀಕ್ಷಿಸಿದ ಅಭಿಮಾನಿಗಳು ಟ್ವಿಟರ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾವನ್ನು ಹೊಗಳಿದ್ದು, ಅತ್ಯುತ್ತಮವಾಗಿ ಮೂಡಿಬಂದಿದೆ ಎಂದಿದ್ದಾರೆ.

ಪರಭಾಷೆಯಲ್ಲೂ ಕೆಜಿಎಫ್–2 ಸಿನಿಮಾ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದು, ಯಶ್ ನಟನೆ ಮತ್ತು ಪ್ರಶಾಂತ್ ನಿರ್ದೇಶನ ಅದ್ಭುತ ಎಂಬ ಮಾತು ಕೇಳಿಬಂದಿದೆ.

ಜತೆಗೆ ಮೊದಲ ದಿನ, ಮೊದಲ ಶೋ ನೋಡಿದ ಸಂಭ್ರಮವನ್ನು ಕೂಡ ಜನರು ಟ್ವೀಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.