ಬೆಂಗಳೂರು: ನಟ ರಾಕಿಂಗ್ ಸ್ಟಾರ್ ಯಶ್ ಅವರು ಜನ್ಮದಿನ ಆಚರಿಸಿಕೊಂಡ ಬೆನ್ನಲ್ಲೇ ಏಪ್ರಿಲ್ನಲ್ಲಿ ಕೆಜಿಎಫ್ 2 ಸಿನಿಮಾ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ.
ಈ ಬಗ್ಗೆ ಚಿತ್ರತಂಡ ಟ್ವೀಟ್ ಮಾಡಿದೆ. ಏಪ್ರಿಲ್ನಲ್ಲಿ ಸಿನಿಮಾ ಬಿಡುಗಡೆಯಾಗುವುದು ಖಚಿತವಾಗಿದೆ.
ಯಶ್ ಮುಂದಿನ ಚಿತ್ರಕ್ಕೆ ನಿರ್ದೇಶಕ ನರ್ತನ್ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆಗಳು ಇವೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆಯಾಗಬೇಕಿದೆ.
ಈ ಹಿಂದೆ ಯಶ್ ಅವರು ಸಂತೂ..ಸ್ಟ್ರೈಟ್ ಫಾರ್ವರ್ಡ್ ಸಿನಿಮಾ ಮಾಡಿದ್ದನ್ನು ಬಿಟ್ಟರೇ ಯಾವುದೇ ಸಿನಿಮಾಗಳನ್ನು ಒಪ್ಪಿಕೊಳ್ಳದೇ ಕೆಜಿಎಫ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದರು.
ಕಿರಾತಕ 2 ಸಿನಿಮಾ ಮಾಡಲು ಒಪ್ಪಿಕೊಂಡಿದ್ದ ಅವರು ನಂತರದ ದಿನಗಳಲ್ಲಿ ಆ ಚಿತ್ರದಿಂದ ದೂರ ಸರಿದಿದ್ದಾರೆ. ಆ ಚಿತ್ರತಂಡ ನೀಡಿದ್ದ ಮುಂಗಡ ಹಣವನ್ನು ಮರಳಿ ನೀಡಿದ್ದಾರೆ.
ಯಶ್ ಅವರ ಮುಂದಿನ ಚಿತ್ರದ ಘೋಷಣೆ ಬಗ್ಗೆ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.