ADVERTISEMENT

Sandalwood: ರಮೇಶ್ ಅರವಿಂದ್‌ ನಟನೆಯ 'ದೈಜಿ'ಯಲ್ಲಿ ಖುಷಿ ರವಿ

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 23:30 IST
Last Updated 9 ಜನವರಿ 2026, 23:30 IST
ಖುಷಿ ರವಿ
ಖುಷಿ ರವಿ   

ರಮೇಶ್ ಅರವಿಂದ್‌ ನಟನೆಯ ‘ದೈಜಿ’ ಚಿತ್ರದ ವಿಶೇಷ ಪಾತ್ರದಲ್ಲಿ ಖುಷಿ ರವಿ ಬಣ್ಣ ಹಚ್ಚಿದ್ದಾರೆ. ಆಕಾಶ್‌ ಶ್ರೀವತ್ಸ ನಿರ್ದೇಶನದ ಚಿತ್ರ ರಮೇಶ್‌ ಅರವಿಂದ್‌ ಅವರ 106ನೇ ಚಿತ್ರವಾಗಿದೆ.

ಆಧ್ಯಾತ್ಮಿಕ ಹಿನ್ನೆಲೆಯ ಪಾತ್ರದಲ್ಲಿ ಖುಷಿ ಕಾಣಿಸಿಕೊಳ್ಳಲಿದ್ದಾರೆ. ಒಂದು ದಿನದ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಉಳಿದ ಚಿತ್ರೀಕರಣ ಪೂರ್ಣವಾಗಿದೆ.‌ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದ್ದು, ಶೀಘ್ರದಲ್ಲಿಯೇ ಬಿಡುಗಡೆ ದಿನಾಂಕ ಘೋಷಿಸಲಾಗುವುದು ಎಂದು ಚಿತ್ರತಂಡ ಹೇಳಿದೆ. 

ರಾಧಿಕಾ ನಾರಾಯಣ್‌ ನಾಯಕಿ. ಅವಿನಾಶ್, ದಿಗಂತ್, ಗುರು ದೇಶಪಾಂಡೆ ಮುಂತಾದವರು ಚಿತ್ರದಲ್ಲಿದ್ದಾರೆ. ರವಿ ಕಶ್ಯಪ್‌ ಬಂಡವಾಳ ಹೂಡಿದ್ದು, ನಕುಲ್ ಅಭಯಂಕರ್ ಹಾಗೂ ಸಚಿನ್ ಬಸ್ರೂರ್ ಸಂಗೀತ, ಜ್ಯೂಡಾ ಸ್ಯಾಂಡಿ ಹಿನ್ನೆಲೆ ಸಂಗೀತ, ಶ್ರೀಶ ಕುದುವಳ್ಳಿ ಛಾಯಾಚಿತ್ರಗ್ರಹಣವಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.