ಬೆಂಗಳೂರು: ನಟ ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಬಿಗ್‌ಬಜೆಟ್ ಚಿತ್ರ ‘ವಿಕ್ರಾಂತ್ ರೋಣ’ ಆಗಸ್ಟ್ 19ರಂದು ತೆರೆಯ ಮೇಲೆ ಬರಲಿದೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಸುದೀಪ್, ‘ವಿಕ್ರಾಂತ್ ರೋಣ ಸಿನಿಮಾದ ಚಿತ್ರೀಕರಣ ಸಿದ್ದತೆ ಮತ್ತು ಪ್ರಕ್ರಿಯೆಯ ಆನಂದವನ್ನು ಅನುಭವಿಸಿದ ನಂತರ ಈಗ ‘ರೋಮಾಂಚನಕಾರಿ’ ಸುದ್ದಿಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಸಮಯ! ವಿಕ್ರಾಂತ್ ರೋಣ ಸಿನಿಮಾ ಆಗಸ್ಟ್ 19 ರಂದು ಭಾರತದಾದ್ಯಂತ ಬಿಡುಗಡೆಗೊಳ್ಳುತ್ತಿದೆ ಎಂದು ತಿಳಿಸಲು ನಮ್ಮ ವಿಕ್ರಾಂತ್ ರೋಣ ತಂಡವು ಹರ್ಷಿಸುತ್ತದೆ’ ಎಂದು ಪೋಸ್ಟ್ ಮಾಡಿದ್ದಾರೆ.
ಚಿತ್ರದ ಟೀಸರ್ ಹಾಗೂ ಕಟೌಟ್ ದುಬೈನಲ್ಲಿರುವ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ರಾರಾಜಿಸಿ ವಿಶ್ವದ ಗಮನಸೆಳೆದಿತ್ತು.
ಅನೂಪ್ ಭಂಡಾರಿ ನಿರ್ದೇಶನದ ಈ ಚಿತ್ರದಲ್ಲಿ ನಿರೂಪ್ ಭಂಡಾರಿ ಹಾಗೂ ನೀತಾ ಅಶೋಕ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಜ್ಯಾಕ್ ಮಂಜು ಈ ಚಿತ್ರದ ನಿರ್ಮಾಪಕರು.
ಕನ್ನಡದ ಜೊತೆಗೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲೂ ಈ ಚಿತ್ರ ತೆರೆ ಕಾಣಲಿದ್ದು, ಚಿತ್ರವು 3ಡಿ ರೂಪದಲ್ಲೂ ಬರುವ ಸಾಧ್ಯತೆ ಇದೆ.
ವಿಕ್ರಾಂತ್ ರೋಣ ಫಸ್ಟ್‌ಲುಕ್:
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.