ADVERTISEMENT

ನಟ ಸುದೀಪ್‌ ಅಕ್ಕನ ಮಗ ಸಂಚಿತ್‌ಗೆ ವಿವೇಕ ಆ್ಯಕ್ಷನ್‌ ಕಟ್‌

​ಪ್ರಜಾವಾಣಿ ವಾರ್ತೆ
Published 1 ಜನವರಿ 2025, 23:30 IST
Last Updated 1 ಜನವರಿ 2025, 23:30 IST
ಸಂಚಿತ್‌ 
ಸಂಚಿತ್‌    

ನಟ ಸುದೀಪ್‌ ಅಕ್ಕನ ಮಗ ಸಂಚಿತ್‌ ವರ್ಷದ ಹಿಂದೆ ‘ಜಿಮ್ಮಿ’ ಸಿನಿಮಾ ಘೋಷಿಸಿದ್ದರು. ಈ ಸಿನಿಮಾ ಮೂಲಕ ನಟನಾಗಿ, ನಿರ್ದೇಶಕನಾಗಿ ಚಂದನವನಕ್ಕೆ ಹೆಜ್ಜೆ ಇಡುತ್ತಿರುವುದಾಗಿ ತಿಳಿಸಿದ್ದರು. ಇದೀಗ ಈ ಪ್ರಾಜೆಕ್ಟ್‌ ಬದಿಗಿರಿಸಿ ಹೊಸ ಪ್ರಾಜೆಕ್ಟ್‌ ಕೈಗೆತ್ತಿಕೊಂಡಿದ್ದಾರೆ ಸಂಚಿತ್‌. 

‘ಮ್ಯಾಕ್ಸ್‌’ ಸಿನಿಮಾ ಯಶಸ್ಸಿನ ಬೆನ್ನಲ್ಲೇ ಸುದೀಪ್‌ ತಮ್ಮ ನಿರ್ಮಾಣ ಸಂಸ್ಥೆಯಿಂದ ಹೊಸ ಸಿನಿಮಾ ಘೋಷಿಸಿದ್ದಾರೆ. ಸುಪ್ರಿಯಾನ್ವಿ ಪ್ರೊಡಕ್ಷನ್ ಮತ್ತು ಕೆ ಆರ್ ಜಿ ಪ್ರೊಡಕ್ಷನ್ಸ್ ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಸಂಚಿತ್ ಸಂಜೀವ್ ನಾಯಕನಾಗಿ ನಟಿಸುತ್ತಿದ್ದಾರೆ. ಸಂಚಿತ್ ಚೊಚ್ಚಲ ಸಿನಿಮಾ ಇದಾಗಿರಲಿದೆ. ಈ ಸಿನಿಮಾವನ್ನು ವಿವೇಕ ನಿರ್ದೇಶನ ಮಾಡುತ್ತಿದ್ದು, ಇದು ಅವರ ಚೊಚ್ಚಲ ಸಿನಿಮಾವಾಗಿದೆ. ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿರುವ ವಿವೇಕ, ಮೈಸೂರು ಮೂಲದವರು. ಕ್ರೈಂ ಥ್ರಿಲ್ಲರ್ ಕಥೆಯನ್ನು ಹೊಂದಿರುವ ಈ ಸಿನಿಮಾದ ಫಸ್ಟ್‌ಲುಕ್ ಮತ್ತು ಶೀರ್ಷಿಕೆ ಜನವರಿ 24ರಂದು ಬಿಡುಗಡೆಯಾಗಲಿದೆ. ಮೈಸೂರಿನಲ್ಲಿ ಈ ಸಿನಿಮಾದ ಕಥೆ ನಡೆಯಲಿದೆ. ಮುಹೂರ್ತದ ದಿನದಿಂದಲೇ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ ಎಂದಿದೆ ಚಿತ್ರತಂಡ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT