ನಟ ಸುದೀಪ್
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ದಾಳಿಯನ್ನು ನಟ ಕಿಚ್ಚ ಸುದೀಪ್ ಬಲವಾಗಿ ಖಂಡಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಈ ಹೇಯ ಕೃತ್ಯದಲ್ಲಿ ಭಾಗಿಯಾದವರನ್ನು ಶಿಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ.
‘ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ದಾಳಿ ನಡೆಸಿರುವುದನ್ನು ಕಂಡು ನೋವಾಗಿದೆ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲಿನ ದಾಳಿ. ಇದು ಸಂಯಮದಿಂದ ಕೂರುವ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆ ನೀಡುವ ಸಮಯ’ ಎಂದಿದ್ದಾರೆ.
ಬಾಲಿವುಡ್, ಟಾಲಿವುಡ್ ಸೇರಿದಂತೆ ಎಲ್ಲ ಚಿತ್ರರಂಗದ ನಟ–ನಟಿಯರು ಈ ದಾಳಿಯನ್ನು ಒಕ್ಕೂರಲಿನಿಂದ ಖಂಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.