ADVERTISEMENT

ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ನಿಗದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ನವೆಂಬರ್ 2025, 12:35 IST
Last Updated 5 ನವೆಂಬರ್ 2025, 12:35 IST
<div class="paragraphs"><p>ನಟ ಸುದೀಪ್</p></div>

ನಟ ಸುದೀಪ್

   

ಚಿತ್ರ: ಇನ್‌ಸ್ಟಾಗ್ರಾಮ್

ಚಂದನವನದ ನಟ ಕಿಚ್ಚ ಸುದೀಪ್‌ ನಟಿಸುತ್ತಿರುವ ಬಹುನಿರೀಕ್ಷಿತ ‘ಮಾರ್ಕ್’ ಚಿತ್ರದ ಟೀಸರ್ ಬಿಡುಗಡೆ ಕುರಿತು ಚಿತ್ರತಂಡ ಅಪ್‌ಡೇಟ್ ನೀಡಿದೆ. ಸಿನಿಮಾ ಟೀಸರ್ ನವೆಂಬರ್ 7 (ಶುಕ್ರವಾರ) ಸಂಜೆ 6.45ಕ್ಕೆ ಬಿಡುಗಡೆಯಾಗಲಿದೆ ಎಂಬ ಮಾಹಿತಿ ಹಂಚಿಕೊಂಡಿದೆ.

ADVERTISEMENT

ಇತ್ತೀಚೆಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ನಟ ಸುದೀಪ್ ‘ಮಾರ್ಕ್’ ಸಿನಿಮಾದ ಪೋಸ್ಟರ್ ಹಂಚಿಕೊಂಡು ‘ಮಾರ್ಕ್ 1ನೇ ಟೀಸರ್ ಈ ವಾರಾಂತ್ಯದಲ್ಲಿ’ ಎಂದು ಬರೆದುಕೊಂಡಿದ್ದರು. ಇದೀಗ ಮಾರ್ಕ್ ಸಿನಿಮಾ ತಂಡ ಮೊದಲ ಟೀಸರ್ ಬಿಡುಗಡೆ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

ಸತ್ಯಜ್ಯೋತಿ ಫಿಲ್ಮ್ಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, ‘ಹೊಸ ಅಧ್ಯಾಯ ಆರಂಭ, ದಿ ಲೆಜೆಂಡ್ ಮಾರ್ಕ್ ನಿರ್ದಿಷ್ಟ ಸ್ಥಾನ, ಮಾರ್ಕ್ ಸಿನಿಮಾ ಟೀಸರ್ ಈ ಶುಕ್ರವಾರ ಸಂಜೆ 6:45ಕ್ಕೆ ಬಿಡುಗಡೆಯಾಗುತ್ತಿದೆ. ನಮ್ಮ ಬಾದ್‌ಶಾ ಕಿಚ್ಚ ಸುದೀಪ್ ಅವರನ್ನು ಹಿಂದೆಂದೂ ಕಾಣದ ಅವತಾರದಲ್ಲಿ ವೀಕ್ಷಿಸಿ’ ಎಂದು ಬರೆದುಕೊಂಡಿದ್ದಾರೆ.

ಇನ್ನು, ‘ಮ್ಯಾಕ್ಸ್‌’ ಚಿತ್ರದ ನಿರ್ದೇಶಕ ವಿಜಯ್‌ ಕಾರ್ತಿಕೇಯ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಸಿನಿಮಾವನ್ನು ‘ಸತ್ಯಜ್ಯೋತಿ ಫಿಲ್ಮ್ಸ್‌’ ನಿರ್ಮಾಣ ಮಾಡುತ್ತಿದೆ. ಇತ್ತೀಚೆಗೆ ಸರೆಗಮಪ ಕನ್ನಡ ಯೂಟ್ಯೂಬ್ ಚಾನೆಲ್‌ನಲ್ಲಿ ಮಾರ್ಕ್ ಸಿನಿಮಾದ 'ಸೈಕೋ ಸೈತಾನ್‌' ಎಂಬ ಹಾಡು ರಿಲೀಸ್ ಆಗಿತ್ತು. ಆ ಹಾಡಿನಲ್ಲಿ ಕಿಚ್ಚ ಸುದೀಪ್ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದರು. ‌

ಕಿಚ್ಚ ಸುದೀಪ್‌ ಡ್ಯಾನ್ಸ್‌ ನೋಡಿದ ಅಭಿಮಾನಿಗಳಂತೂ ಸಿಕ್ಕಾಪಟ್ಟೆ ಖುಷಿ ಪಟ್ಟಿದ್ದರು. ಅಲ್ಲದೇ ಸಾಮಾಜಿಕ ಜಾಲತಾಣದಲ್ಲೂ ‘ಸೈಕೋ ಸೈತಾನ್‌’ ಹಾಡು ಸಿಕ್ಕಾಪಟ್ಟೆ ಜನಪ್ರಿಯತೆ ಪಡೆದುಕೊಂಡಿದೆ. ನಟ ಸುದೀಪ್‌ ನಟನೆಯ 47ನೇ ಸಿನಿಮಾ ಇದಾಗಿದ್ದು, ಡಿಸೆಂಬರ್‌ 25ಕ್ಕೆ ತೆರೆಕಾಣಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.