
ರಾಜ್ ಬಿ ಶೆಟ್ಟಿ, ಕಿಚ್ಚ ಸುದೀಪ್
ನಟ, ನಿರ್ದೇಶಕ ರಾಜ್ ಬಿ ಶೆಟ್ಟಿಯವರು ನಾಯಕನಾಗಿ ನಟಿಸಿರುವ ‘ರಕ್ಕಸಪುರದೋಳ್’ ಚಿತ್ರದ ಟೀಸರ್ ನಿನ್ನೆ (ಡಿಸೆಂಬರ್ 30) ಬಿಡುಗಡೆಯಾಗಿದೆ. ಇದೀಗ ರಾಜ್ ಬಿ ಶೆಟ್ಟಿ ಹಾಗೂ ಇಡೀ ರಕ್ಕಸಪುರದೋಳ್ ಸಿನಿಮಾ ತಂಡಕ್ಕೆ ಕಿಚ್ಚ ಸುದೀಪ್ ಶುಭಾಶಯ ತಿಳಿಸಿದ್ದಾರೆ.
ಈ ಬಗ್ಗೆ ನಟ ಕಿಚ್ಚ ಸುದೀಪ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ‘ರಕ್ಕಸಪುರದೋಳ್ ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯಾಗಿದೆ. ಇಡೀ ಚಿತ್ರ ತಂಡಕ್ಕೆ ನನ್ನ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.
ರವಿ ಸಾರಂಗ ಅವರ ನಿರ್ದೇಶನದ ಚೊಚ್ಚಲ ಸಿನಿಮಾ ‘ರಕ್ಕಸಪುರದೋಳ್’ನಲ್ಲಿ ರಾಜ್ ಶೆಟ್ಟಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಹಸ ನಿರ್ದೇಶಕ ರವಿವರ್ಮ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ‘ಗರುಡ ಗಮನ ವೃಷಭ ವಾಹನ’, ‘ಟೋಬಿ’ ಸಿನಿಮಾಗಳ ಬಳಿಕ ರಾಜ್ ಬಿ ಶೆಟ್ಟಿ ಮತ್ತೆ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಯಾದ ಟೀಸರ್‌ನಲ್ಲಿ ರಾಜ್ ಬಿ ಶೆಟ್ಟಿಯವರು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
2026ರ ಫೆಬ್ರುವರಿ 6ರಂದು ರಕ್ಕಸಪುರದೋಳ್ ಸಿನಿಮಾ ತೆರೆ ಕಾಣಲಿದೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ವಿಲಿಯಂ ಡೇವಿಡ್ ಛಾಯಾತ್ರಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನವಿದೆ. ಸ್ವತಿಷ್ಠ ಕೃಷ್ಣನ್, ಗೋಪಾಲಕೃಷ್ಣ ದೇಶಪಾಂಡೆ, ಬಿ.ಸುರೇಶ್, ಅರ್ಚನಾ ಕೊಟ್ಟಿಗೆ ಮುಂತಾದವರು ಚಿತ್ರದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.