ADVERTISEMENT

Koragajja: ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಆರು ಭಾಷೆಗಳಲ್ಲಿ ತೆರೆಗೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2025, 22:30 IST
Last Updated 14 ಅಕ್ಟೋಬರ್ 2025, 22:30 IST
ಚಿತ್ರತಂಡ
ಚಿತ್ರತಂಡ   

ದಕ್ಷಿಣ ಕನ್ನಡದ ದೈವಗಳ ಕಥೆಯನ್ನು ಹೊಂದಿರುವ ‘ಕೊರಗಜ್ಜ’ ಚಿತ್ರ ಆರು ಭಾಷೆಗಳಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ಸುಧೀರ್ ಅತ್ತಾವರ್ ನಿರ್ದೇಶನದ ಚಿತ್ರವಿದು. ಚಿತ್ರದ ಫಸ್ಟ್‌ಲುಕ್‌ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ.‌

‘ಮೂರು ವರ್ಷಗಳ ಹಿಂದೆ ಆರಂಭವಾದ ಸಿನಿಮಾ ಈಗ ಅನೇಕ ಅಡೆತಡೆಗಳನ್ನು ದಾಟಿ ಬಿಡುಗಡೆಯ ಹಂತ ತಲುಪಿದೆ. ಕೊರಗಜ್ಜನ ಆಶೀರ್ವಾದದಿಂದ ಸಿನಿಮಾ ಅಂದುಕೊಂಡಂತೆ ಬಂದಿದೆ. ಚಿತ್ರದಲ್ಲಿ ಆರು ಭಾಷೆಗಳಿಂದ ಒಟ್ಟು 31 ಹಾಡುಗಳಿವೆ. ಗೋಪಿ ಸುಂದರ್ ಅವರ ಸಂಗೀತ ಸಂಯೋಜನೆಯಲ್ಲಿ ಪ್ರಸಿದ್ಧ ಗಾಯಕ-ಗಾಯಕಿಯರು ಹಾಡಿದ್ದಾರೆ. ಸುಮಾರು ಇಪ್ಪತ್ತನಾಲ್ಕು ವರ್ಷದ ತನಿಯ ದೈವತ್ವಕ್ಕೇರಿ ಕೊರಗಜ್ಜನಾದ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತಿದೆ’ ಎಂದರು ನಿರ್ದೇಶಕ.

ತ್ರಿವಿಕ್ರಮ ಸಪಲ್ಯ ಬಂಡವಾಳ ಹೂಡಿದ್ದಾರೆ. ಕಬೀರ್‌ ಬೇಡಿ, ಶ್ರುತಿ, ಭವ್ಯ ಮುಂತಾದವರು ಚಿತ್ರದಲ್ಲಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.