ADVERTISEMENT

‘ದಿಯಾ’ ಚಿತ್ರದ ನಿರ್ಮಾಪಕ ಕೃಷ್ಣ ಚೈತನ್ಯ ಸೇರಿ ಮೂವರ ವಿರುದ್ಧ FIR: ಏನಿದು ಕೇಸ್?

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2025, 0:45 IST
Last Updated 18 ಆಗಸ್ಟ್ 2025, 0:45 IST
<div class="paragraphs"><p>ಪೊಲೀಸ್ – ಪ್ರಾತಿನಿಧಿಕ ಚಿತ್ರ</p></div>

ಪೊಲೀಸ್ – ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ವರ್ತೂರು ಹೋಬಳಿಯ ಕಸವನಹಳ್ಳಿ ಗ್ರಾಮದ ಜಮೀನಿನ ಒಡೆತನದ ವಿಚಾರವಾಗಿ ‘ದಿಯಾ’ ಚಿತ್ರದ ನಿರ್ಮಾಪಕ ಕೃಷ್ಣ ಚೈತನ್ಯ ಸೇರಿದಂತೆ ಮೂವರ ವಿರುದ್ಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿನಾಪ್ಸೆ ಕನ್‍ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್‍ನ ಕೃಷ್ಣ ಚೈತನ್ಯ, ಸಚಿನ್ ನಾರಾಯಣ್ ಹಾಗೂ ಸಹಚರರು ಕಸವನಹಳ್ಳಿ ಗ್ರಾಮದ ಸರ್ವೆ ನಂಬರ್‌ 52ರಲ್ಲಿನ 3 ಎಕರೆ 35 ಗುಂಟೆ ಜಮೀನಿಗೆ ನಕಲಿ ದಾಖಲೆಪತ್ರಗಳನ್ನು ಸೃಷ್ಟಿಸಿಕೊಂಡು ಅತಿಕ್ರಮ ಪ್ರವೇಶ ಮಾಡಿದ್ದಾರೆ. ಆ ಜಮೀನು ತಮಗೆ ಸೇರಿದ್ದು, ಕೃಷ್ಣ ಚೈತನ್ಯ ಮತ್ತು ಸಹಚರರು ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ರಾಮಮೂರ್ತಿ ಅವರು ಬೆಳ್ಳಂದೂರು ಠಾಣೆಗೆ ದೂರು ಕೊಟ್ಟಿದ್ದಾರೆ.

ADVERTISEMENT

ಇದಕ್ಕೆ ಪ್ರತಿಯಾಗಿ ಕೃಷ್ಣ ಚೈತನ್ಯ ಅವರು ರಾಮಮೂರ್ತಿ, ಸತೀಶ್, ಸುನಿಲ್, ಶಿವರಾಮರೆಡ್ಡಿ, ರಾಘವೇಂದ್ರ ಮತ್ತು ಸಹಚರರ ವಿರುದ್ಧ ದೂರು ಕೊಟ್ಟಿದ್ದಾರೆ. ದೂರು ಹಾಗೂ ಪ್ರತಿದೂರು ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.