
ಪ್ರಜಾವಾಣಿ ವಾರ್ತೆ
ನಟ ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಎರಡನೇ ಸಿನಿಮಾ ‘ಲಕ್ಷ್ಮೀಪುತ್ರ’ನ ಫಸ್ಟ್‌ಲುಕ್ ಇತ್ತೀಚೆಗೆ ರಿಲೀಸ್ ಆಗಿದೆ.
ಸಿನಿಮಾವನ್ನು ನಿರ್ದೇಶಕ ಎ.ಪಿ.ಅರ್ಜುನ್ ಪತ್ನಿ ಅನ್ನಪೂರ್ಣ ಅರ್ಜುನ್ ನಿರ್ಮಾಣ ಮಾಡಿದ್ದು, ವಿಜಯ್ ಎಸ್.ಸ್ವಾಮಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ಚಿಕ್ಕಣ್ಣಗೆ ಜೋಡಿಯಾಗಿ ವಂದಿತಾ ನಟಿಸಿದ್ದಾರೆ. ತಾರಾ ಚಿಕ್ಕಣ್ಣನ ತಾಯಿಯಾಗಿ ಅಭಿನಯಿಸಿದ್ದಾರೆ. ಚಿತ್ರದಲ್ಲಿ ಕುರಿ ಪ್ರತಾಪ್, ಧರ್ಮಣ್ಣ ಸೇರಿದಂತೆ ದೊಡ್ಡ ತಾರಾಗಣವಿದೆ. ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ಎ.ಪಿ.ಅರ್ಜುನ್ ಸಾಹಿತ್ಯ ಬರೆದಿದ್ದಾರೆ. ತಾಯಿ ಮಗನ ಬಾಂಧವ್ಯದ ಕಥೆ ಚಿತ್ರದಲ್ಲಿದೆ. ಚಿತ್ರದ ಆ್ಯಕ್ಷನ್ ಸನ್ನಿವೇಶಗಳನ್ನು ಮಾಸ್ ಮಾದ ನಿರ್ದೇಶನ ಮಾಡಿದ್ದಾರೆ. ಗಿರೀಶ್ ಆರ್. ಗೌಡ ಛಾಯಾಚಿತ್ರಗ್ರಹಣ ಸಿನಿಮಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.