ADVERTISEMENT

‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 16:30 IST
Last Updated 5 ಫೆಬ್ರುವರಿ 2026, 16:30 IST
<div class="paragraphs"><p>ಚಿತ್ರ ಕೃಪೆ:&nbsp;<a href="https://x.com/OfficialViji">@OfficialViji</a></p></div>

ಚಿತ್ರ ಕೃಪೆ: @OfficialViji

   

ಬೆಂಗಳೂರು: ದುನಿಯಾ ವಿಜಯ್ ಮತ್ತು ರಚಿತಾ ರಾಮ್‌ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

‘ಎಲ್ಲ ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಈ ಸಿನಿಮಾ ಪ್ರದರ್ಶನಕ್ಕೆ ಫೆ. 5ರಿಂದ ಆರು ತಿಂಗಳವರೆಗೆ ಟಿಕೆಟ್‌ ಮೇಲೆ ರಾಜ್ಯ ಸರಕು ಮತ್ತು ಸೇವಾ ತೆರಿಗೆ (ಎಸ್‌ಜಿಎಸ್‌ಟಿ) ವಿಧಿಸಬಾರದು’ ಎಂದು ಆದೇಶದಲ್ಲಿ ಆರ್ಥಿಕ ಇಲಾಖೆ ತಿಳಿಸಿದೆ.

ADVERTISEMENT

ಉತ್ತಮ ಸಾಮಾಜಿಕ ಸಂದೇಶ ಹೊಂದಿರುವ ‘ಲ್ಯಾಂಡ್‌ ಲಾರ್ಡ್’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಬೇಕೆಂದು ಮುಖ್ಯಮಂತ್ರಿಗೆ ದಲಿತ ಸಂಘಟನೆಗಳು ಮನವಿ ಮಾಡಿದ್ದವು.

ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಹೇಳಿದ್ದ ಸಿದ್ದರಾಮಯ್ಯ, ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ‘ಲ್ಯಾಂಡ್ ಲಾರ್ಡ್’ನಂತಹ ಇನ್ನಷ್ಟು ಸಿನಿಮಾಗಳು ಮೂಡಿಬರಲು ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.