
ಚಿತ್ರ ಕೃಪೆ: @OfficialViji
ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರದ ವಿಡಿಯೊ ತುಣುಕು ಒಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ‘ಲ್ಯಾಂಡ್ ಲಾರ್ಡ್’ ಸಿನಿಮಾದ ವಿಡಿಯೊಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಚಿತ್ರವನ್ನು ನಿರ್ದೇಶಕ ಜಡೇಜ ಕೆ.ಹಂಪಿ ನಿರ್ದೇಶನ ಮಾಡುತ್ತಿದ್ದು, ಕೆ.ವಿ ಸತ್ಯಪ್ರಕಾಶ್ ಹಾಗೂ ಹೇಮಂತ್ ಗೌಡ ಅವರು ನಿರ್ಮಾಣ ಮಾಡುತ್ತಿದ್ದಾರೆ.
ಜನವರಿ 20ರಂದು ವಿಜಯ್ ಅವರ ಹುಟ್ಟು ಹಬ್ಬ ಇರುವುದರಿಂದ ಆ ದಿನವೇ ‘ಲ್ಯಾಂಡ್ ಲಾರ್ಡ್’ ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.
'ಇದೊಂದು 80ರ ಕಾಲಘಟ್ಟದಲ್ಲಿ ನಡೆಯುವ ಈ ನೆಲದ ಕಥೆ. ಈ 'ಲ್ಯಾಂಡ್‌ಲಾರ್ಡ್' ಕೊನೆಯವರೆಗೂ ನೆನಪಿನಲ್ಲಿ ಉಳಿಯುವ ಸಿನಿಮಾ ಆಗಲಿದ್ದು, ಕನ್ನಡ ಚಿತ್ರರಂಗದಲ್ಲಿ ಮೈಲಿಗಲ್ಲು ಸ್ಥಾಪಿಸಲಿದೆ. ಪ್ರತಿಯೊಬ್ಬನಿಗೂ ಬದುಕಲು ಅರ್ಹತೆ ಇದೆ, ಸಮಾನತೆ ಬೇಕು ಎನ್ನುವುದು ಮನಸ್ಸಿನಲ್ಲಿದ್ದರೆ ಅವರು ಖಂಡಿತಾ 'ಲ್ಯಾಂಡ್‌ಲಾರ್ಡ್' ನೋಡಬೇಕು ಎಂದು ಈ ಹಿಂದೆ ವಿಜಯ್ ಹೇಳಿದ್ದರು.
ರಚಿತಾ ರಾಮ್, ರಿತನ್ಯಾ, ಶಿಶಿರ್ ಬೈಕಾಡಿ, ರಾಕೇಶ್ ಅಡಿಗ, ಅಚ್ಯುತ್ ಕುಮಾರ್, ಮಿತ್ರ, ಅಭಿಷೇಕ್ ದಾಸ್ ಸೇರಿದಂತೆ ಅನೇಕರು 'ಲ್ಯಾಂಡ್‌ಲಾರ್ಡ್' ಚಿತ್ರದಲ್ಲಿ ನಟಿಸಿದ್ದಾರೆ.
ಅನೇಕ ಸಿನಿಮಾಗಳಲ್ಲಿ ಖಳನಾಯಕ, ನಾಯಕ ನಟನ ಪಾತ್ರದಲ್ಲಿ ನಟಿಸುತ್ತಿದ್ದ ವಿಜಯ್ ಅವರು ಇತ್ತೀಚೆಗೆ ಸಲಗ, ಭೀಮ ಚಿತ್ರಗಳನ್ನು ನಿರ್ದೇಶಿಸುವ ಮೂಲಕ ಪ್ರೇಕ್ಷಕರಿಗೆ ಇನ್ನಷ್ಟು ಹತ್ತಿರವಾಗುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.