
ನಟಿ ರಚಿತಾ ರಾಮ್
ಚಿತ್ರ: ಇನ್‌ಸ್ಟಾಗ್ರಾಮ್
‘ಲ್ಯಾಂಡ್‌ಲಾರ್ಡ್’ ಸಿನಿಮಾದಲ್ಲಿ ಅಭಿನಯಿಸುತ್ತಿರುವ ನಟಿ ರಚಿತಾ ರಾಮ್ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ನಟ ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಸಿನಿಮಾದಲ್ಲಿ ನಟಿ ರಚಿತಾ ರಾಮ್ ನಿಂಗವ್ವ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.
ಚಿತ್ರೀಕರಣದ ವೇಳೆ ಕ್ಲಿಕ್ಕಿಸಿಕೊಂಡ ಫೋಟೊವನ್ನು ನಟಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಆ ಪೋಸ್ಟ್‌ನಲ್ಲಿ ನಟಿ ಮುರಿದ ಕುರ್ಚಿಯನ್ನು ಕೈಯಲ್ಲಿ ಹಿಡಿದು ಕೋಪೋದ್ರಿಕ್ತರಾಗಿ ಕಾಣಿಸಿಕೊಂಡಿದ್ದಾರೆ. ಆ ಪೋಸ್ಟ್ ಜೊತೆಗೆ ‘ನನ್ನ ವೃತ್ತಿಜೀವನದಲ್ಲಿ ಈ ಪಾತ್ರವನ್ನು ನಿರ್ವಹಿಸಿದ್ದಕ್ಕೆ ನಿಜವಾಗಿಯೂ ಧನ್ಯವಾದ. ಲ್ಯಾಂಡ್‌ಲಾರ್ಡ್ ಚಿತ್ರದಲ್ಲಿ ನಿಂಗವ್ವ ಆಗಿದ್ದೇನೆ. ಈ ನಿಂಗವ್ವ ನಿಮ್ಮ ಹೃದಯವನ್ನು ಮುಟ್ಟುತ್ತಾಳೆ ಎಂದು ಭಾವಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ಇದೇ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನು, ಈ ಚಿತ್ರವನ್ನು ನಿರ್ದೇಶಕ ಜಡೇಜ ಕೆ.ಹಂಪಿ ನಿರ್ದೇಶನ ಮಾಡುತ್ತಿದ್ದು, ಕೆ.ವಿ ಸತ್ಯಪ್ರಕಾಶ್ ಹಾಗೂ ಹೇಮಂತ್ ಗೌಡ ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ನಟ ದುನಿಯಾ ವಿಜಯ್, ನಟಿ ರಚಿತಾ ರಾಮ್, ರಿತನ್ಯಾ, ಶಿಶಿರ್ ಬೈಕಾಡಿ, ರಾಕೇಶ್ ಅಡಿಗ, ಅಚ್ಯುತ್ ಕುಮಾರ್, ಮಿತ್ರ, ಅಭಿಷೇಕ್ ದಾಸ್ ಸೇರಿದಂತೆ ಅನೇಕರು ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.