
ನಟ ದುನಿಯಾ ವಿಜಯ್ ಹಾಗೂ ನಟಿ ರಚಿತಾ ರಾಮ್ ಅಭಿನಯದಲ್ಲಿ ಮೂಡಿಬರುತ್ತಿರುವ ‘ಲ್ಯಾಂಡ್‌ಲಾರ್ಡ್’ ಸಿನಿಮಾದ ಮೊದಲ ಹಾಡು ನಿನ್ನೆ (ಡಿ.18) ಬಿಡುಗಡೆಯಾಗಿದೆ. ಇದೀಗ ಲ್ಯಾಂಡ್‌ಲಾರ್ಡ್ ಚಿತ್ರದ ನಿಂಗವ್ವ ಹಾಡಿನ ಹಿಂದಿನ ಮೇಕಿಂಗ್ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ.
ಇನ್ನು, ಲ್ಯಾಂಡ್‌ಲಾರ್ಡ್ ಸಿನಿಮಾದ ಹಾಡು ರಿಲೀಸ್ ಆಗೋ ಮೊದಲೇ ರೆಕಾರ್ಡಿಂಗ್ ಮೇಕಿಂಗ್ ವಿಡಿಯೋ ರಿಲೀಸ್ ಮಾಡಲಾಗಿದೆ. ವಿಡಿಯೊದಲ್ಲಿ ಗಾಯಕ ವಿಜಯ್ ಪ್ರಕಾಶ್, ಗಾಯಕಿ ಅನನ್ಯ ಭಟ್, ನಿರ್ದೇಶಕ ಜಡೇಶ್ ಹಂಪಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಖತ್ ಮಜಾ ಮಾಡಿದ್ದಾರೆ. ಇದೇ ವಿಡಿಯೋದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಸಿನಿ ಪ್ರೇಮಿಗಳಿಗೆ ಇಷ್ಟವಾಗಿದೆ.
ಈ ಸಿನಿಮಾದಲ್ಲಿ ನಟಿ ರಚಿತಾ ರಾಮ್ ನಿಂಗವ್ವ ಪಾತ್ರದಲ್ಲಿ ನಟಿಸಿದ್ದಾರೆ. ರಾಚಯ್ಯ ಅನ್ನೋ ಪಾತ್ರದಲ್ಲಿ ದುನಿಯಾ ವಿಜಯ್ ಅಭಿನಯಿಸಿದ್ದಾರೆ. ಇನ್ನು, ಈ ಚಿತ್ರವನ್ನು ‘ಕಾಟೇರ’ ಸಿನಿಮಾದ ಕಥೆಗಾರ ಜಡೇಶ ಕೆ. ಹಂಪಿ ನಿರ್ದೇಶನ ಮಾಡುತ್ತಿದ್ದು, ಕೆ.ವಿ ಸತ್ಯಪ್ರಕಾಶ್ ಹಾಗೂ ಹೇಮಂತ್ ಗೌಡ ಅವರು ನಿರ್ಮಾಣ ಮಾಡುತ್ತಿದ್ದಾರೆ. ಜನವರಿ 23ರಂದು ಲ್ಯಾಂಡ್ ಲಾರ್ಡ್ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.