
ದುನಿಯಾ ವಿಜಯ್ ನಿರ್ದೇನದ ‘ಲ್ಯಾಂಡ್ ಲಾರ್ಡ್’ ಸಿನಿಮಾದ ನಿಂಗವ್ವ, ಹಾಗೂ ರಾಚ್ಚಯ್ಯನ ಪಾತ್ರದ ಬಗ್ಗೆ ನಟಿ ರಚಿತಾ ರಾಮ್ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಈ ಚಿತ್ರದಲ್ಲಿ ರಚಿತಾ ರಾಮ್ ಅವರು ನಿಂಗವ್ವ ಆಗಿ, ನಟ ದುನಿಯ ವಿಜಯ್ ಅವರು ರಾಚ್ಚಯ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ನಟಿ ರಚಿತಾ ರಾಮ್ ‘ಲ್ಯಾಂಡ್ ಲಾರ್ಡ್’ ಚಿತ್ರದಲ್ಲಿ ನಿಂಗವ್ವ ಎಂಬ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
'ಇದೊಂದು 80ರ ಕಾಲಘಟ್ಟದಲ್ಲಿ ನಡೆಯುವ ಈ ನೆಲದ ಕಥೆ.
ಕೆ.ವಿ.ಸತ್ಯಪ್ರಕಾಶ್ ನಿರ್ಮಾಣದ 'ಲ್ಯಾಂಡ್ ಲಾರ್ಡ್' ಚಿತ್ರವು ಜ. 23ರಂದು ತೆರೆ ಕಾಣಲಿದೆ.
ಈ ಚಿತ್ರದಲ್ಲಿ ದುನಿಯಾ ವಿಜಯ್ ಅವರ ಮಗಳು ಮೋನಿಕಾ, ಉಮಾಶ್ರೀ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ, ಅಚ್ಯುತ್ ಕುಮಾರ್, ಬಿ.ಸುರೇಶ್ ಮೊದಲಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.