ADVERTISEMENT

ಲ್ಯಾಂಡ್‌ಲಾರ್ಡ್‌ನಲ್ಲಿ ದುನಿಯಾ ವಿಜಯ್‌ ಪುತ್ರಿ ರಿತನ್ಯ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 20:19 IST
Last Updated 31 ಆಗಸ್ಟ್ 2025, 20:19 IST
   

ದುನಿಯಾ ವಿಜಯ್‌ ನಟನೆಯ ‘ಲ್ಯಾಂಡ್‌ಲಾರ್ಡ್‌’ ಚಿತ್ರದಲ್ಲಿ ಅವರ ಪುತ್ರಿ ರಿತನ್ಯ ವಿಜಯ್‌ ಪಾತ್ರ ಪರಿಚಯಿಸುವ ಪೋಸ್ಟರ್‌ ಅನ್ನು ಚಿತ್ರತಂಡ ಇತ್ತೀಚೆಗಷ್ಟೇ ಬಿಡುಗಡೆಗೊಳಿಸಿದೆ. ಜಡೇಶ್‌ ಹಂಪಿ ನಿರ್ದೇಶನದ ಚಿತ್ರವಿದು. ರಿತನ್ಯ ಜನ್ಮ ದಿನದ ಅಂಗವಾಗಿ ಚಿತ್ರದಲ್ಲಿ ಅವರ ಮೂರು ವಿಭಿನ್ನ ಲುಕ್‌ಗಳನ್ನು ಪರಿಚಯಿಸುವ ಪೋಸ್ಟರ್‌ಗಳನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ.

ದರ್ಶನ್ ಅವರ ‘ಸಾರಥಿ’ ಸಿನಿಮಾ ನಿರ್ಮಾಣ ಮಾಡಿದ್ದ ಕೆ‌.ವಿ.ಸತ್ಯಪ್ರಕಾಶ್ ಹಾಗೂ ಹೇಮಂತ್ ಗೌಡ ಕೆ.ಎಸ್. ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಹಳ್ಳಿಯಲ್ಲಿ ನಡೆಯುವ ಕಥೆಯನ್ನು ಹೊಂದಿರುವ ಈ ಚಿತ್ರ ಪೋಸ್ಟ್‌ಪ್ರೊಡಕ್ಷನ್‌ ಹಂತದಲ್ಲಿದ್ದು, ಈ ವರ್ಷದ ಅಂತ್ಯಕ್ಕೆ ತೆರೆಗೆ ಬರುವ ಸಾಧ್ಯತೆಯಿದೆ. ದುನಿಯಾ ವಿಜಯ್‌ಗೆ ರಚಿತಾ ರಾಮ್‌ ಜೋಡಿಯಾಗಿದ್ದಾರೆ. ರಿತನ್ಯ ವಿಜಯ್‌ ಅವರ ಮೊದಲ ಸಿನಿಮಾ ಇದಾಗಿದೆ. ಅಜನೀಶ್ ಲೋಕನಾಥ್ ಸಂಗೀತ, ಸ್ವಾಮಿ ಜೆ. ಗೌಡ ಛಾಯಾಚಿತ್ರಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.