ADVERTISEMENT

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ: ವದಂತಿಗಳಿಗೆ ಕಿವಿಗೊಡದಂತೆ ವಕ್ತಾರರು ಮನವಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2022, 8:32 IST
Last Updated 22 ಜನವರಿ 2022, 8:32 IST
ಲತಾ ಮಂಗೇಶ್ಕರ್‌
ಲತಾ ಮಂಗೇಶ್ಕರ್‌    

ನವದೆಹಲಿ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ (92) ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಲತಾ ಮಂಗೇಶ್ಕರ್‌ ಅವರ ಆರೋಗ್ಯ ಕುರಿತಾದ ವದಂತಿಗಳಿಗೆ ಕಿವಿಗೊಡದಂತೆ ಅವರ ವಕ್ತಾರರು ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಆರೋಗ್ಯ ಕುರಿತು ಗಾಳಿ ಸುದ್ದಿಗಳು ಹರಡಿದ್ದವು. ಈ ಹಿನ್ನೆಲೆಯಲ್ಲಿ ಲತಾ ಮಂಗೇಶ್ಕರ್‌ ವಕ್ತಾರರು ಮನವಿ ಮಾಡಿದ್ದಾರೆ.

ಎರಡು ವಾರಗಳಹಿಂದೆ ಅವರಿಗೆ ಕೋವಿಡ್‌–19 ದೃಢಪಟ್ಟಿದ್ದು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಅವರಿಗೆ ಕೊರೊನಾ ವೈರಸ್‌ ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದು. ಮುನ್ನೆಚ್ಚರಿಕೆಯ ಕಾರಣಗಳಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ವೈದ್ಯರು ಅವರನ್ನು ನೋಡಲು ಯಾರಿಗೂ ಅವಕಾಶ ಮಾಡಿಕೊಟ್ಟಿಲ್ಲ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.