ADVERTISEMENT

ಕನ್ನಡದಲ್ಲಿ ಲಿಯೋ ಪೋಸ್ಟರ್‌: ಲೋಕೇಶ್‌ ಕನಕರಾಜ್‌ ಆ್ಯಕ್ಷನ್‌ ಕಟ್‌ ಸಿನಿಮಾ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2023, 19:45 IST
Last Updated 20 ಸೆಪ್ಟೆಂಬರ್ 2023, 19:45 IST
ಲಿಯೋ 
ಲಿಯೋ    

‘ಕೈದಿ’, ‘ವಿಕ್ರಮ್‌’ ಖ್ಯಾತಿಯ ನಿರ್ದೇಶಕ ಲೋಕೇಶ್‌ ಕನಕರಾಜ್‌ ಆ್ಯಕ್ಷನ್‌ ಕಟ್‌ ಹೇಳಿರುವ, ವಿಜಯ್‌ ನಟನೆಯ ‘ಲಿಯೋ’ ರಿಲೀಸ್‌ಗೆ ಸಜ್ಜಾಗುತ್ತಿದೆ. ಇದೇ ಸಂದರ್ಭದಲ್ಲಿ ಚಿತ್ರತಂಡವು ಕನ್ನಡ ಪೋಸ್ಟರ್‌ ರಿಲೀಸ್‌ ಮಾಡಿದೆ.

ಸಿನಿಮಾ ಅ.19ರಂದು ತೆರೆಕಾಣುತ್ತಿದ್ದು, ಚಿತ್ರದ ಕರ್ನಾಟಕ ವಿತರಣೆಯ ಹಕ್ಕುಗಳನ್ನು ಸ್ವಾಗತ್‍ ಎಂಟರ್‌ಪ್ರೈಸಸ್ ಸಂಸ್ಥೆಯು ಪಡೆದುಕೊಂಡಿದೆ. ಸಂಸ್ಥೆಯು ಚಿತ್ರವನ್ನು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದೆ. 

‘ಮಾಸ್ಟರ್‌’ ಸಿನಿಮಾ ನಂತರ ಲೋಕೇಶ್‌ ಹಾಗೂ ವಿಜಯ್‌ ಜೊತೆಯಾಗಿ ಕೈಗೆತ್ತಿಕೊಂಡಿರುವ ಪ್ರಾಜೆಕ್ಟ್‌ ಇದಾಗಿದ್ದು, ಸೆವೆನ್‌ ಸ್ಕ್ರೀನ್‌ ಸ್ಟುಡಿಯೋಸ್‌ ಬ್ಯಾನರ್‌ನಡಿ ಲಲಿತ್‌ ಕುಮಾರ್‌ ಈ ಸಿನಿಮಾ ನಿರ್ಮಿಸಿದ್ದಾರೆ. ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆಯ ಜವಾಬ್ದಾರಿಯನ್ನೂ ಲೋಕೇಶ್‌ ಹೊತ್ತಿದ್ದು, ಏಕಕಾಲಕ್ಕೆ ಐದು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್‌ ಆಗುತ್ತಿದೆ. ಚಿತ್ರಕ್ಕೆ ಅನಿರುದ್ಧ್‌ ರವಿಚಂದರ್‌ ಸಂಗೀತ ನಿರ್ದೇಶನವಿದೆ. ಬಾಲಿವುಡ್‌ ನಟ ಸಂಜಯ್‌ ದತ್‌ ಈ ಚಿತ್ರದ ಮೂಲಕ ಕಾಲಿವುಡ್‌ಗೆ ಹೆಜ್ಜೆ ಇಡುತ್ತಿದ್ದು, ತ್ರಿಷಾ, ಅರ್ಜುನ್‌ ಸರ್ಜಾ, ಪ್ರಿಯಾ ಆನಂದ್‌, ಮನ್ಸೂರ್‌ ಅಲಿ ಖಾನ್‌ ಮುಂತಾದವರು ತಾರಾಬಳಗದಲ್ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.