
ಬಹುತೇಕ ಹೊಸಬರಿಂದಲೇ ಕೂಡಿರುವ ‘ಲೈಫ್ ಎಲ್ಲಿಂದ ಎಲ್ಲಿಗೆ’ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಚಿತ್ರದ ಹಾಡುಗಳು ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. ಮೂವರು ಪ್ರಾಣ ಸ್ನೇಹಿತರ ಬದುಕಿನ ಪಯಣದ ಕಥೆಯನ್ನು ಹೊಂದಿರುವ ಚಿತ್ರಕ್ಕೆ ಅರ್ಜುನ್ ಶಿವನ್ ಆ್ಯಕ್ಷನ್ ಕಟ್ ಹೇಳಿದ್ದಾರೆ.
‘ಸಿನಿಮಾ ಮಾಡೋದಲ್ಲ, ಅದಾಗೇ ಆಗಬೇಕು. ಲಾಕ್ ಡೌನ್ ಸಂದರ್ಭದಲ್ಲಿ ಒಂದು ಸಿನಿಮಾ ಮಾಡಿದ್ದೆ. ಇದು ನನ್ನ ಎರಡನೆ ಚಿತ್ರ. ಇದೊಂದು ಸ್ನೇಹಿತರ ಜರ್ನಿ ಸಿನಿಮಾ. ‘ಕಿರಿಕ್ ಪಾರ್ಟಿ’ ಚಿತ್ರದ ರೀತಿಯಲ್ಲಿ ಹಾಸ್ಯಮಯ ಸನ್ನಿವೇಶಗಳೇ ಹೆಚ್ಚಿವೆ. ಈ ಚಿತ್ರಕ್ಕಾಗಿ ಮೈಸೂರಿನಿಂದ ದೆಹಲಿವರೆಗೆ ಸುತ್ತಾಡಿದ್ದೇವೆ. ಸ್ನೇಹಿತರ ನಡುವೆ ಅಹಂಕಾರ ಇರಬಾರದು ಎಂಬುದನ್ನು ನಮ್ಮ ಚಿತ್ರದಲ್ಲಿ ತೋರಿಸಿದ್ದೇವೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದಿದ್ದು, ಮಾರ್ಚ್ ವೇಳೆಗೆ ಚಿತ್ರ ಬಿಡುಗಡೆ ಯೋಚನೆಯಿದೆ’ ಎಂದರು ನಿರ್ದೇಶಕ.
ಲೆನಿನ್, ಮಂಜುನಾಥ್, ಕ್ರಿಶ್, ಅರ್ಜುನ್ ಶಿವನ್, ಅನು ಪ್ರೇಮ ಪ್ರಮುಖ ಪಾತ್ರಗಳಲ್ಲಿದ್ದಾರೆ. ವಿಪ್ರ ವೆಂಚರ್ಸ್ ಮೂಲಕ ಮುಳ್ಳೂರು ಗುರುಪ್ರಸಾದ್ ಬಂಡವಾಳ ಹೂಡಿದ್ದಾರೆ. ವೈಶಾಖ ಶಶಿಧರನ್, ಕಿರಣ್ ವಸಿಷ್ಠ ಸಂಗೀತ, ಸುಮಂತ್ ಛಾಯಾಚಿತ್ರಗ್ರಹಣ ಈ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.