ಶಶಾಂಕ್ ನಿರ್ದೇಶನದ ‘ಲವ್ 360’ ಚಿತ್ರದ ಟ್ರೇಲರ್‌ನ್ನು ನಟ ಶಿವರಾಜಕುಮಾರ್ ಅವರು ಬಿಡುಗಡೆ ಮಾಡಿದರು. ಚಿತ್ರ ಆಗಸ್ಟ್ 19ರಂದು ರಾಜ್ಯದಾದ್ಯಂತ ತೆರೆ ಕಾಣುತ್ತಿದೆ.ಪ್ರವೀಣ್ ಈ ಚಿತ್ರದ ನಾಯಕ, ರಚನಾ ಇಂದರ್ ನಾಯಕಿ.
ಶಶಾಂಕ್ ನನ್ನ ಅಚ್ಚುಮೆಚ್ಚಿನ ನಿರ್ದೇಶಕರಲ್ಲಿ ಒಬ್ಬರು. ಅವರ ನಿರ್ದೇಶನದಲ್ಲಿ ನಾನು ನಟಿಸಬೇಕಿತ್ತು. ಕಾರಣಾಂತರದಿಂದ ಆಗಿಲ್ಲ. ಮುಂದೆ ನಮ್ಮಿಬ್ಬರ ಕಾಂಬಿನೇಶನ್‌ನಲ್ಲಿ ಚಿತ್ರ ಬರುತ್ತದೆ. ‘ಲವ್ 360’ ಚಿತ್ರದ ಟ್ರೇಲರ್ ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸುಮಧುರವಾಗಿದೆ. ಅದರಲ್ಲೂ ಸಿದ್ ಶ್ರೀರಾಮ್ ಹಾಡಿರುವ ‘ಜಗವೇ ನೀನು ಗೆಳತಿಯೆ’ ಹಾಡಂತೂ ನನಗೆ ಬಹಳ ಇಷ್ಟ. ನಾಯಕ, ನಾಯಕಿ ಎಲ್ಲರೂ ಚೆನ್ನಾಗಿ ಅಭಿನಯಿಸಿದ್ದಾರೆ’ ಎಂದರು ನಟ ಶಿವರಾಜಕುಮಾರ್.
‘ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆಯವರು ನಮ್ಮ ಚಿತ್ರವನ್ನು ವಿತರಿಸುತ್ತಿದ್ದಾರೆ. ನೂರೈವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ’ ಎಂದರು ನಿರ್ದೇಶಕ ಶಶಾಂಕ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.