ADVERTISEMENT

ನಟ ವಸಿಷ್ಠ ಸಿಂಹ ಅಭಿನಯದ ‘ಲವ್‌ ಲಿ’ ಸಿನಿಮಾ ಆಗಸ್ಟ್‌ನಲ್ಲಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2023, 7:29 IST
Last Updated 13 ಜೂನ್ 2023, 7:29 IST
ಸ್ಟೆಫಿ ಪಟೇಲ್‌ ಹಾಗೂ ವಸಿಷ್ಠ ಸಿಂಹ 
ಸ್ಟೆಫಿ ಪಟೇಲ್‌ ಹಾಗೂ ವಸಿಷ್ಠ ಸಿಂಹ    

ನಟ ವಸಿಷ್ಠ ಸಿಂಹ ಅವರ ಹೊಸ ಪ್ರಾಜೆಕ್ಟ್‌ ‘Love ಲಿ’ ಚಿತ್ರೀಕರಣ ಅಂತಿಮ ಹಂತದಲ್ಲಿದ್ದು, ಸಿನಿಮಾವನ್ನು ಆಗಸ್ಟ್‌ನಲ್ಲಿ ತೆರೆಗೆ ತರಲು ಚಿತ್ರತಂಡ ಸಿದ್ಧತೆ ಆರಂಭಿಸಿದೆ. ಪ್ರಚಾರದ ಮೊದಲ ಹಂತವಾಗಿ ಸಿನಿಮಾದ ಟೈಟಲ್‌ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ನಟರಾದ ರವಿಚಂದ್ರನ್, ಉಪೇಂದ್ರ, ‘ನೆನಪಿರಲಿ’ ಪ್ರೇಮ್, ನಟಿಯರಾದ ಪ್ರಿಯಾಂಕ ಉಪೇಂದ್ರ ಹಾಗೂ ಹರಿಪ್ರಿಯ ಈ ಹಾಡು ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಅಭುವನಾಸ್ ಕ್ರೀಯೆಷನ್ಸ್ ಬ್ಯಾನರ್‌ನಲ್ಲಿ ರವೀಂದ್ರ ಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಕಥೆ ಬರೆದು ಮೊದಲಬಾರಿ ನಿರ್ದೇಶನ ಮಾಡಿದ್ದಾರೆ ಚೇತನ್ ಕೇಶವ್.

‘ಟೈಟಲ್ ಟ್ರ್ಯಾಕ್‌ನಂತೆ ಇಡೀ ಸಿನಿಮಾ ಕೂಡ ಕಲರ್‌ಫುಲ್ ಆಗಿ ಮೂಡಿಬಂದಿದೆ. ಚಿತ್ರದ ಮೊದಲಾರ್ಧ ರೋಮ್ಯಾಂಟಿಕ್ ಕಥೆಯಿದೆ. ದ್ವಿತೀಯಾರ್ಧದಲ್ಲಿ ಚಿತ್ರದ ತಿರುಳಿದೆ. ಕಳೆದ 9 ವರ್ಷದಿಂದ ಚಿತ್ರರಂಗದಲ್ಲಿ ಕಾರ್ಯನಿರ್ವಹಿಸಿರುವ ನಾನು, ನರ್ತನ್ ಅವರ ಜೊತೆ ‘ಮಫ್ತಿ’ ಚಿತ್ರಕ್ಕೆ ಕೆಲಸ ಮಾಡಿದ್ದೇನೆ. ಹೆಚ್ಚಾಗಿ ಆ್ಯಕ್ಷನ್ ಸಿನಿಮಾಗಳಲ್ಲಿ ಕೆಲಸ ಮಾಡಿದ್ದೇನೆ. ಹಾಗಾಗಿ ಈ ಚಿತ್ರದಲ್ಲಿ ಮಾಸ್, ಕ್ಲಾಸ್ ಎರಡನ್ನೂ ಬಳಸಿದ್ದೇನೆ. ಒಂದು ಸಂದೇಶವೂ ಚಿತ್ರದಲ್ಲಿದೆ. ಮಂಗಳೂರು, ಬೆಂಗಳೂರು ಉಡುಪಿಯಲ್ಲಿ ಚಿತ್ರದ ಚಿತ್ರೀಕರಣ ನಡೆದಿದ್ದು, ಲಂಡನ್‌ನಲ್ಲಿ ಒಂದು ಹಾಡಿನ ಚಿತ್ರೀಕರಣ ನಡೆಸಲು ಚಿಂತನೆ ನಡೆಸಿದ್ದೇವೆ. ರೌಡಿಸಮ್, ಪ್ರೀತಿ ಹಾಗೂ ಕೌಟುಂಬಿಕ ಜಾನರ್‌ನಲ್ಲಿ ಸಿನಿಮಾವಿದೆ’ ಎನ್ನುತ್ತಾರೆ ಚೇತನ್ ಕೇಶವ್. 

ADVERTISEMENT

‘ನನ್ನನ್ನು ತುಂಬಾ ಕಾಡಿದಂತಹ ಸಿನಿಮಾ ಇದು. ಹಾಡಿನಿಂದ ಚಿತ್ರದ ಪ್ರಚಾರ ಆರಂಭಿಸಿದ್ದು, ಆಗಸ್ಟ್‌ನಲ್ಲಿ ಸಿನಿಮಾ ಬಿಡುಗಡೆ ಮಾಡುವ ಯೋಜನೆ ಇದೆ. ಇದು ಸುಂದರ ಪ್ರೇಮಕಥೆಯ ಚಿತ್ರ’ ಎಂದಿದ್ದಾರೆ ವಸಿಷ್ಠ ಸಿಂಹ. 

ಈಗಾಗಲೇ ತಮಿಳು, ತೆಲುಗು ಚಿತ್ರಗಳಲ್ಲಿ ನಟಿಸಿರುವ ಸ್ಟೆಫಿ ಪಟೇಲ್‌ ಈ ಚಿತ್ರದ ಮುಖಾಂತರ ಸ್ಯಾಂಡಲ್‌ವುಡ್‌ಗೆ ಕಾಲಿಡುತ್ತಿದ್ದಾರೆ. ಚಿತ್ರದಲ್ಲಿ ‘ಜನನಿ’ ಎಂಬ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. 

ಸ್ಟೆಫಿ ಪಟೇಲ್‌ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.