
ಮದ್ರಾಸ್ ಹೈಕೋರ್ಟ್ ಮತ್ತು ನಟ ವಿಜಯ್
Credit: iStock and X
ಚೆನ್ನೈ: ತಮಿಳು ನಟ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಮದ್ರಾಸ್ ಹೈಕೋರ್ಟ್‌ನ ವಿಭಾಗೀಯ ಪೀಠವು ರದ್ದುಗೊಳಿಸಿದೆ. ಜತೆಗೆ, ಹೊಸದಾಗಿ ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದೆ.
ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರಕ್ಕೆ ತಕ್ಷಣ ಸೆನ್ಸಾರ್ ಅನುಮತಿ ನೀಡುವಂತೆ ಮದ್ರಾಸ್ ಹೈಕೋರ್ಟ್‌ನ ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಸಲ್ಲಿಸಿದ್ದ ಮೇಲ್ಮನವಿಯನ್ನು ಮಂಗಳವಾರ ಮದ್ರಾಸ್ ಹೈಕೋರ್ಟ್‌ನ ವಿಭಾಗೀಯ ಪೀಠವು ಅಂಗೀಕರಿಸಿದೆ.
‘ಜನ ನಾಯಗನ್’ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡುವಂತೆ ಸೆನ್ಸಾರ್ ಮಂಡಳಿಗೆ ನಿರ್ದೇಶನ ನೀಡಿದ್ದ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದೆ. ಜತೆಗೆ ಪ್ರಕರಣ ಕುರಿತು ಹೊಸದಾಗಿ ವಿಚಾರಣೆ ನಡೆಸುವಂತೆಯೂ ಸೂಚಿಸಿದೆ. ಇದರಿಂದಾಗಿ ಚಿತ್ರದ ಬಿಡುಗಡೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
ಸಿನಿಮಾ ಬಿಡುಗಡೆಗೆ ಜನವರಿ 9ರಂದು ದಿನ ನಿಗದಿಯಾಗಿತ್ತು. ಆದರೆ ಪ್ರಮಾಣಪತ್ರ ಸಿಗದ ಕಾರಣ ಸಿನಿಮಾ ಬಿಡುಗಡೆ ವಿಳಂಬಗೊಂಡಿದೆ. ರಾಜಕೀಯ ಪ್ರವೇಶಿಸಿರುವ ವಿಜಯ್ ಅವರ ಕೊನೆಯ ಸಿನಿಮಾ ಎಂದು ಹೇಳಲಾಗುತ್ತಿರುವ ಕಾರಣ ಈ ಸಿನಿಮಾ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.