ADVERTISEMENT

ನವೆಂಬರ್‌ನಲ್ಲಿ ‘ಮೆಜೆಸ್ಟಿಕ್‌–2’ ತೆರೆಗೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 22:58 IST
Last Updated 29 ಅಕ್ಟೋಬರ್ 2025, 22:58 IST
ಸಂಹಿತಾ ವಿನ್ಯಾ, ಭರತ್ ಕುಮಾರ್ 
ಸಂಹಿತಾ ವಿನ್ಯಾ, ಭರತ್ ಕುಮಾರ್    

ಅಮ್ಮಾ ಎಂಟರ್‌ಪ್ರೈಸಸ್ ಮೂಲಕ ಎಚ್.ಆನಂದಪ್ಪ ನಿರ್ಮಿಸಿರುವ ‘ಮೆಜೆಸ್ಟಿಕ್-2’ ಸಿನಿಮಾ ನವೆಂಬರ್‌ನಲ್ಲಿ ತೆರೆಕಾಣಲಿದೆ. ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್ ಕುಮಾರ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ.  

ನಟಿ ಶ್ರುತಿ ಅವರು ನಾಯಕನ ತಾಯಿ ಪಾತ್ರವನ್ನು ನಿಭಾಯಿಸಿದ್ದಾರೆ. ಈಗಾಗಲೇ ಶೂಟಿಂಗ್, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿವೆ ಎಂದಿದೆ ಚಿತ್ರತಂಡ. ಇತ್ತೀಚೆಗಷ್ಟೇ ಈ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಿದೆ. 

ಈ ಚಿತ್ರಕ್ಕೆ ರಾಮು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಭರತ್ ಕುಮಾರ್‌ಗೆ ಜೋಡಿಯಾಗಿ ಸಂಹಿತಾ ವಿನ್ಯಾ ನಟಿಸಿದ್ದಾರೆ. ಈಗಿನ ಮೆಜೆಸ್ಟಿಕ್ ಪ್ರದೇಶ ಹೇಗಿದೆ, ಅಲ್ಲಿ ನಡೆಯುವ ದಂಧೆಗಳು, ಅಕ್ರಮ ಚಟುವಟಿಕೆಗಳು ಹಾಗೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತದೆ ಎನ್ನುವುದನ್ನು ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯ ಮೂಲಕ ಚಿತ್ರದಲ್ಲಿ ಹೇಳಲಾಗಿದೆ ಎಂದಿದ್ದಾರೆ ರಾಮು.

ADVERTISEMENT

ವಿಶೇಷವಾಗಿ ನಟಿ ಮಾಲಾಶ್ರೀ ಹೀರೊ ಇಂಟ್ರೊಡಕ್ಷನ್‌ ಹಾಡಿನಲ್ಲಿ ನಟಿಸಿದ್ದಾರೆ. ವಿನು ಮನಸು ಸಂಗೀತ ನಿರ್ದೇಶನ, ವೀನಸ್‌ ಮೂರ್ತಿ ಛಾಯಾಚಿತ್ರಗ್ರಹಣ, ಚಿನ್ನಯ್ಯ ಸಾಹಸ ನಿರ್ದೇಶನ ಚಿತ್ರಕ್ಕಿದೆ.