ADVERTISEMENT

ಬಾಲಿವುಡ್‌ ನಟಿ ಮಲೈಕಾ ಅರೋರಾಗೆ ಕೋವಿಡ್‌ ದೃಢ

ಪಿಟಿಐ
Published 7 ಸೆಪ್ಟೆಂಬರ್ 2020, 9:09 IST
Last Updated 7 ಸೆಪ್ಟೆಂಬರ್ 2020, 9:09 IST
ಮಲೈಕಾ ಅರೋರಾ
ಮಲೈಕಾ ಅರೋರಾ   

ಮುಂಬೈ: ಬಾಲಿವುಡ್‌ ನಟಿಮಲೈಕಾ ಅರೋರಾ ಅವರಿಗೆ ಕೋವಿಡ್‌–19 ಇರುವುದು ಸೋಮವಾರ ದೃಢಪಟ್ಟಿದ್ದು, ಅವರು ಮನೆಯಲ್ಲಿ ಪ್ರತ್ಯೇಕ ವಾಸಕ್ಕೆ ಒಳಗಾಗಿದ್ದಾರೆ.

ಈ ಬಗ್ಗೆ ಮಲೈಕಾ ಅರೋರಾ ಅವರು ಇನ್‌ಸ್ಟಾಗ್ರಾಂ ಮೂಲಕ ತಿಳಿಸಿದ್ದಾರೆ.

‘ನನಗೆ ಇವತ್ತು ಕೊರೊನಾ ಸೋಂಕು‌ ದೃಢಪಟ್ಟಿದೆ. ಆದರೆ ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ. ನಾನು ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ವೈದ್ಯರ ಮಾರ್ಗದರ್ಶನಗಳಿಗೆ ಅನುಸಾರವಾಗಿ ನಾನು ಮನೆಯಲ್ಲಿ ಪ್ರತ್ಯೇಕ ವಾಸ ಮಾಡುತ್ತಿದ್ದೇನೆ. ನೀವು ಕೂಡ ಮನೆಯಲ್ಲಿ ಸುರಕ್ಷಿತವಾಗಿರಿ’ ಎಂದುಇನ್‌ಸ್ಟಾಗ್ರಾಂನಲ್ಲಿ ಅವರು ಬರೆದುಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.