ADVERTISEMENT

ಹಾಟ್ ಫೋಟೊ ಹಂಚಿಕೊಂಡ ಮಾಳವಿಕಾ ಮೋಹನನ್: ಅಭಿಮಾನಿಗಳಿಂದ ಭಾರಿ ಮೆಚ್ಚುಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜುಲೈ 2022, 12:50 IST
Last Updated 1 ಜುಲೈ 2022, 12:50 IST
ಮಾಳವಿಕಾ ಮೋಹನನ್ (ಇನ್‌ಸ್ಟಾಗ್ರಾಮ್‌ ಚಿತ್ರ)
ಮಾಳವಿಕಾ ಮೋಹನನ್ (ಇನ್‌ಸ್ಟಾಗ್ರಾಮ್‌ ಚಿತ್ರ)   

ಬೆಂಗಳೂರು: ಬಹುಭಾಷಾ ನಟಿ ಮಾಳವಿಕಾ ಮೋಹನನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಸದಾ ಸಕ್ರಿಯರಾಗಿರುವ ಮಾಳವಿಕಾ, ಪ್ರವಾಸ, ಹಬ್ಬ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ಕ್ಲಿಕ್ಕಿಸಿದ ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.

ಇದೀಗ ಹಳದಿ ಬಣ್ಣದ ಆಕರ್ಷಕ ಉಡುಗೆಯಲ್ಲಿಸಖತ್ ಹಾಟ್ ಆಗಿ ಕಾಣಿಸುವ ಮೂಲಕ ಕ್ಯಾಮೆರಾಗೆ ಪೋಸ್‌ ನೀಡಿರುವ ಫೋಟೊಗಳನ್ನು ಮಾಳವಿಕಾ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರಕ್ಕೆ ಸೆಲೆಬ್ರಿಟಿಗಳು ಸೇರಿದಂತೆ ಅಭಿಮಾನಿಗಳು ಹೃದಯ ಎಮೋಜಿಯೊಂದಿಗೆ ಕಾಮೆಂಟ್ ಮಾಡಿದ್ದಾರೆ.

ADVERTISEMENT

‘ನಾನು ಮತ್ತು ವರಲಕ್ಷ್ಮಿ’ ಚಿತ್ರದ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ಹಲವು ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಮಜಿದ್ ಮಜೀದಿ ನಿರ್ದೇಶನದ ‘Beyond the Clouds’ಹಿಂದಿ ಸಿನಿಮಾದಲ್ಲಿ ಮಾಳವಿಕಾ ಕಾಣಸಿಕೊಂಡಿದ್ದರು. ಆದರೆ ಮಾಳವಿಕಾಗೆ ದೊಡ್ಡ ಅವಕಾಶ ಸಿಕ್ಕಿದ್ದು ರಜನಿಕಾಂತ್‌ ಅವರ ‘ಪೆಟ್ಟಾ’ಸಿನಿಮಾದಲ್ಲಿ.

‘ದಳಪತಿ’ವಿಜಯ್ ನಟನೆಯ ‘ಮಾಸ್ಟರ್’ಸಿನಿಮಾದಲ್ಲಿ ಮಾಳವಿಕಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ಅವರು ಬಾಲಿವುಡ್‌ ಅಂಗಳದಲ್ಲಿ ಮಿಂಚುತ್ತಿದ್ದಾರೆ.

ಓದಿ...

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.