ADVERTISEMENT

ಮಲಯಾಳಂ ನಟ ಕಲಾಭವನ್ ನವಾಸ್ ಹಠಾತ್ ಸಾವು: ಹೃದಯಾಘಾತ ಶಂಕೆ

ಪಿಟಿಐ
Published 2 ಆಗಸ್ಟ್ 2025, 2:16 IST
Last Updated 2 ಆಗಸ್ಟ್ 2025, 2:16 IST
<div class="paragraphs"><p>ಕಲಾಭವನ್ ನವಾಸ್</p></div>

ಕಲಾಭವನ್ ನವಾಸ್

   

Credit: X

ಕೊಚ್ಚಿ: ಮಲಯಾಳಂ ಚಿತ್ರನಟ ಹಾಗೂ ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಅವರು ಚೊಟ್ಟನಿಕ್ಕರದಲ್ಲಿರುವ ಹೋಟೆಲ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಸಿನಿಮಾ ಚಿತ್ರೀಕರಣ ನಿಮಿತ್ತ ಚೊಟ್ಟನಿಕ್ಕರಕ್ಕೆ ಬಂದಿದ್ದ 51 ವರ್ಷದ ಕಲಾಭವನ್ ನವಾಸ್ ಅವರು ಹೋಟೆಲ್‌ನಲ್ಲಿ ತಂಗಿದ್ದರು. ಹೆಚ್ಚು ಹೊತ್ತು ರೂಮ್‌ನಿಂದ ಹೊರಬಂದಿರಲಿಲ್ಲ. ಹೋಟೆಲ್‌ ಸಿಬ್ಬಂದಿ ರೂಮ್‌ಗೆ ಹೋಗಿ ನೀಡಿದಾಗ ನವಾಸ್ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲಾಭವನ್ ನವಾಸ್ ಅವರು ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಲಾಭವನ್ ನವಾಸ್ ಅವರು ಮಲಯಾಳಂ ಚಿತ್ರರಂಗದಲ್ಲಿ ಮಿಮಿಕ್ರಿ ಕಲಾವಿದ, ಹಿನ್ನೆಲೆ ಗಾಯಕ ಹಾಗೂ ನಟರಾಗಿ ಗುರುತಿಸಿಕೊಂಡಿದ್ದರು.

ಕಲಾಭವನ್ ನವಾಸ್ ಅವರ ನಿಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.