ADVERTISEMENT

ಮಲಯಾಳಂ ನಟ ಎನ್‌. ಡಿ ಪ್ರಸಾದ್‌ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 11:07 IST
Last Updated 27 ಜೂನ್ 2022, 11:07 IST
ಎನ್‌. ಡಿ ಪ್ರಸಾದ್‌
ಎನ್‌. ಡಿ ಪ್ರಸಾದ್‌   

ತಿರುವನಂತಪುರ: ಮಲಯಾಳಂ ನಟ ಎನ್‌.ಡಿ. ಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 43 ವರ್ಷ ವಯಸ್ಸಾಗಿತ್ತು.

ಖಳನಾಯಕನ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಅವರು ಕೆಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು. ಶನಿವಾರ ಸಂಜೆ ಮನೆಯಲ್ಲಿ ಯಾರೂಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು. ಅವರಿಗೆ ಇಬ್ಬರು ಮಕ್ಕಳಿದ್ದಾರೆ.

ADVERTISEMENT

2016ರಲ್ಲಿ ಬಿಡುಗಡೆಯಾಗಿದ್ದ ‘ಆ್ಯಕ್ಷನ್‌ ಹಿರೋ ಬಿಜು‘ ಸಿನಿಮಾದಲ್ಲಿ ಅವರು ಖಳನ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು.

ಡ್ರಗ್ಸ್‌ ಪ್ರಕರಣ ಸೇರಿದಂತೆ ಅವರ ಮೇಲೆ ಹಲವು ಪೊಲೀಸ್‌ ಪ್ರಕರಣಗಳು ದಾಖಲಾಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.