ADVERTISEMENT

ಯುವ ನಟಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ವಿಜಯ್‌ ಬಾಬು ಬಂಧನ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 7:43 IST
Last Updated 27 ಜೂನ್ 2022, 7:43 IST
ವಿಜಯ್‌ ಬಾಬು
ವಿಜಯ್‌ ಬಾಬು   

ಕೊಚ್ಚಿ: ಯುವ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋದಡಿಯಲ್ಲಿ ಮಲಯಾಳಂ ನಟ ವಿಜಯ್‌ ಬಾಬು ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ವಿಜಯ್‌ ಬಾಬು ಅವರನ್ನು ಬಂಧಿಸಿರುವ ಪೊಲೀಸರು ಜುಲೈ 3ರವರೆಗೆ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಕಳೆದ ವಾರ ಅವರಿಗೆ ನ್ಯಾಯಾಲಯ ನಿರೀಕ್ಷಣ ಜಾಮೀನು ನೀಡಿತ್ತು.

ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿಯ ಫೋಟೊವನ್ನು ವಿಜಯ್‌ ಬಾಬು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದರ ವಿರುದ್ಧ ಅವರ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.